Sunday, September 8, 2024

ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನುಗಳು ಜಾರಿ: ಸಿಆರ್‌ಪಿಸಿ ಅಡಿಯಲ್ಲಿ ಮೊದಲ FIR ದಾಖಲು!

Most read

ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಯಾಗಿದ್ದು, ಐಪಿಸಿ ಬದಲಾಗಿ, ಸಿಆರ್‌ಪಿಸಿ  ಜಾರಿಗೊಳಿಸುವ ಮೂಲಕ ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ ಕೇಂದ್ರ ಸರ್ಕಾರ ಅಂತಿಮ ಹಾಡಿದೆ. ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ.

ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಂಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಹೊಸ ಕಾನೂನುಗಳು  ಸೋಮವಾರ (ಜುಲೈ 1)ದಿಂದ ಜಾರಿಗೆ ಬಂದಿವೆ.

ಶೂನ್ಯ ಎಫ್‌ಐಆರ್, ಪೊಲೀಸ್ ದೂರುಗಳ ಆನ್‌ಲೈನ್ ನೋಂದಣಿ, ಎಸ್‌ಎಂಎಸ್‌ನಂತಹ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸಮನ್ಸ್ ಮತ್ತು ಎಲ್ಲ ಘೋರ ಅಪರಾಧಗಳಿಗೆ ಅಪರಾಧದ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿಯಂತಹ ನಿಬಂಧನೆಗಳನ್ನು ಒಳಗೊಂಡಿವೆ.

ನಿಯಮ ಬಾಹಿರವಾಗಿ ದೆಹಲಿ ರೈಲ್ವೇ ಮೇಲ್ಸೇತುವೆಯಲ್ಲಿ ವ್ಯಾಪಾರ ನಡೆಸಿದ್ದಕ್ಕಾಗಿ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಬಿಎನ್‌ಎಸ್ ಸೆಕ್ಷನ್ 285ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಹೊಸ ಕಾನೂನಿನಲ್ಲಿ ಏನು ಬದಲಾವಣೆ?


* ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14ದಿನದಿಂದ 60 ದಿನಗಳವರೆಗೂ ಹೆಚ್ಚಳ
* 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
* 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
* ಏಳು ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ

* ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
* ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು 2 ತಿಂಗಳಲ್ಲಿ ತನಿಖೆ ಮುಗಿಸಬೇಕು
* ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಕೆಯ ಸಂಬಂಧಿಕರ ಸಮ್ಮುಖದಲ್ಲಿ ಮಹಿಳಾ ಅಧಿಕಾರಿಯ ಮುಂದೆ ಹೇಳಬೇಕು.

* ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
* ಕ್ರಿಮಿನಲ್ ಕೇಸ್ ವಿಚಾರಣೆ. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು.
* ತನಿಖೆ, ಕೋರ್ಟ್ ಸಮನ್ಸ್‌ಗಳನ್ನು ಮಸೇಜ್‌, ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
* ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ

More articles

Latest article