ದಸರಾ ಉದ್ಘಾಟಿಸಿದರೆ ಅಭ್ಯಂತರ ಇಲ್ಲ; ಮೈಸೂರು ಸಂಸದ ಯದುವೀರ್‌ ಸ್ಪಷ್ಟನೆ

Most read

ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್  ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಮೈಸೂರು ಲೋಖಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಒಂದು ವರ್ಗ ವಿರೋಧ ವ್ಯಕ್ತಪಡಿಸಿದೆ. ಬಾನು ಮುಷ್ತಾಕ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಅವರ ಆಯ್ಕೆಯಲ್ಲಿ ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಕನ್ನಡ ಬಾವುಟದ ಬಣ್ಣಗಳನ್ನು ಕುರಿತು ಅವರು ನೀಡಿರುವ ಹೇಳಿಕೆ ನೋಡಿದ್ದೇನೆ. ಅವರು ಆ ರೀತಿ ಹೇಳಿಕೆ ನೀಡಿರುವುದು ಸರಿ ಅಲ್ಲ. ಬಹುಶಃ ಇದೇ ಕಾರಣಕ್ಕಾಗಿ ಕೆಲವರು ವಿರೋಧ ಮಾಡುತ್ತಿದ್ದಾರೆ. ನಮ್ಮ ಧರ್ಮವನ್ನು ವಿರೋಧಿಸದೆ, ನಮ್ಮ ಧಾರ್ಮಿಕ ಭಕ್ತಿಗೆ ಧಕ್ಕೆ ಬಾರದಂತೆ ಅವರು ಉದ್ಘಾಟನೆ ನೆರವೇರಿಸಬಹದು. ಒಟ್ಟಾರೆ ಚಾಮುಂಡೇಶ್ವರಿಗೆ ಗೌರವ ಕೊಡಬೇಕು ಅಷ್ಟೇ ನಮ್ಮ ಅಭಿಪ್ರಾಯ. ನಮ್ಮ ಪಕ್ಷದ ಮತ್ತು ನನ್ನ ನಿಲುವು ಒಂದೇ ಆಗಿರುತ್ತದೆ.  ನಮ್ಮ ಧರ್ಮವನ್ನು ಗೌರವಿಸಿ ಚಾಮುಂಡೇಶ್ವರಿಗೆ ಕೊಡಬೇಕಾದ ಗೌರವವನ್ನು ಮುಷ್ತಾಕ್ ಅವರು ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

More articles

Latest article