ಸಿದ್ದರಾಮಯ್ಯ ಅವರಿಗೆ ಗಡುವು ನಿಗದಿಪಡಿಸಿಲ್ಲ: ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ

Most read

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ಅವರಿಗೆ ಯಾವುದೇ ಗಡುವು ನಿಗದಿಪಡಿಸಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಆದರೂ ಪಕ್ಷದ ಪ್ರತಿಯೊಬ್ಬರೂ ಹೈಕಮಾಂಡ್ ನಿರ್ಧರಿಸುವ ಯಾವುದೇ ನಿರ್ಧಾರಕ್ಕೆ ಬದ್ಧರಾಗಿರಬೇಕಾಗುತ್ತದೆ ಎಂದ ಅವರು ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್‌ ಇತಿಶ್ರೀ ಹಾಡಬೇಕು ಎಂದು  ಒತ್ತಾಯಿಸಿದರು.

ನಾನು ಮಹದೇವಪ್ಪ ಅವರೊಂದಿಗೆ ರಾಜಕೀಯ ಕುರಿತು ಯಾವುದೇ ಚರ್ಚೆ ನಡೆಸಿಲ್ಲ. ತುಮಕೂರಿನಲ್ಲಿ ತಮ್ಮ ನೇತೃತ್ವದಲ್ಲಿ ಸಹಕಾರ ಸಂಘ ರಚನೆ ಕುರಿತು ಚರ್ಚಿಸಿದ್ದಾಗಿ ಹೇಳಿದರು.

2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಗಳಿಸಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಲ್‌ ಪಿ ನಾಯಕರನ್ನಾಗಿ ಆಯ್ಕೆ ಮಾಡಿದಾಗ ಎರಡೂವರೆ ವರ್ಷ ಮಾತ್ರ ಇವರ ಅವಧಿ ಎಂದು ತಿಳಿಸಿರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

More articles

Latest article