ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣ ಮುಚ್ಚಿಡುವುದಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Most read

 ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್)‌ ಸಂಭವಿಸಿರುವ ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಬಿಮ್ಸ್‌ನಲ್ಲಿ ಬಾಣಂತಿಯರು, ಹಸಿಗೂಸುಗಳ ಸಾವಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಯಾಕೆ  ಸಮಸ್ಯೆಯಾಗಿದೆ, ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ ಎಂದರು.

ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ. ಸಾವನ್ನ ತಡೆಯಲು ಯಾವ ಕ್ರಮಕೈಗೊಳ್ಳಬೇಕು.  ಏನೆಲ್ಲ ಮಾಡಬೇಕು ಅದನ್ನ ಮಾಡುತ್ತಿದ್ದೇವೆ. ನಮ್ಮ ಜಿಲ್ಲೆಯಲ್ಲಿ 54 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಾ ಇದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ ಎಂದು ತಿಳಿಸಿದರು. ಬಾಣಂತಿರು, ಹಸುಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್ ಗೂ  ಸಂಬಂಧ ಇಲ್ಲ. ಕಬ್ಬಿನಾಂಶ ಕೊರತೆ, ಅವಧಿಪೂರ್ವ ಜನನ ಹೀಗೆ ಅನೇಕ ಕಾರಣಗಳಿವೆ. ಒಂದು ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ 6ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್‌ ಪಾತ್ರವಾಗಿದೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂತಹುದ್ದೇ ನಿಖರ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

More articles

Latest article