ಬೆಂಗಳೂರಿನ ಈ ಭಾಗದಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಇರುವುದಿಲ್ಲ

ಬೆಂಗಳೂರು: ನಾಲ್ಕನೇ ಹಂತದ ಕಾವೇರಿ ನೀರು ಪೂರೈಕೆ ಯೋಜನೆ ಕಾಮಗಾರಿಯ ಕಾರಣ ಫೆಬ್ರವರಿ 20ರ ಗುರುವಾರ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ. ಈ ಬಗ್ಗೆ ಬೆಂಗಳೂರು ಜಲ ಮಂಡಳಿ ಮಾಹಿತಿ ನೀಡಿದೆ.

ಮಾರತ್ತಹಳ್ಳಿಯ ಜೀವಿಕಾ ಆಸ್ಪತ್ರೆ ಬಳಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 20 ರಂದು ನಗರದ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆ ತಿಳಿಸಿದೆ. ಮಾರತ್ತಹಳ್ಳಿ, ದೊಡ್ಡನೆಕುಂದಿ, ಮುನ್ನೆಕೊಳಲು, ಓಎಂಬಿಆರ್‌ಲೇಔಟ್, ಎಚ್‌ಆರ್‌ಬಿಆರ್‌ಲೇಔಟ್, ಸಿಗೇಹಳ್ಳಿ, ಬಟ್ಟರ ಹಳ್ಳಿ, ಮೇಡೆಹಳ್ಳಿ, ಟಿ.ಸಿ.ಪಾಳ್ಯ, ವಿಜಿನಪುರ, ಬೆಳ್ಳಂದೂರು, ಯಮಲೂರು, ಮುರುಗೇಶ್ ಪಾಳ್ಯ, ಕೋಣೆನ ಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ, ಜೀವನ್ ಭೀಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಅಗತ್ಯವಿರುವ ನೀರನ್ನು ಮೊದಲೇ ಸಂಗ್ರಹಿಸಿಟ್ಟುಕೊಂಡು ಸಹಕರಿಸುವಂತೆ ಜಲಮಂಡಳಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ.

ನಾಲ್ಕನೇ ಹಂತದ ಕಾವೇರಿ ನೀರಿನ ಪೂರೈಕೆ ಯೋಜನೆಯ ಕಾಮಗಾರಿ ಗುರುವಾರ ಬೆಳಗ್ಗೆ 9 ರಿಂದ ರಾತ್ರಿ 9 ರ ವರೆಗೆ ನಡೆಯಲಿದೆ. ಇದರಿಂದಾಗಿ ಈ ಅವಧಿಯಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ.

More articles

Latest article

Most read