ನವದೆಹಲಿ: ಪಕ್ಷದ ಸಂಘಟನೆ ಕುರಿತು ಪಕ್ಷದ ವರಿಷ್ಠರನ್ನು ಭೇಟಿ ಆಗುತ್ತೇನೆ. ಆದರೆ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆದೆ ಎಂದು ಸಿಎಂ ಸಿದ್ದರಾಮಯ್ಯ ಅವರಾಗಲೀ ಅಥವಾ ನಾನಾಗಲೀ ಹೇಳಿದ್ದೇನೆಯೇ? ಇಲ್ಲವಲ್ಲ! ಹಾಗಾಗಿ ಈ ವಿಷಯ ಕುರಿತು ಪದೇ ಪದೇ ಮಾತನಾಡುವ ಅವಶ್ಯಕತೆ ಏನಿದೆ ಎಂದು ಮರುಪ್ರಶ್ನೆ ಹಾಕಿದರು.
ಪಕ್ಷದ ಚೌಕಟ್ಟು ಬಿಟ್ಟು ನಾನು ಏನನ್ನೂ ಮಾಡುವುದಿಲ್ಲ. ನವೆಂಬರ್ ಕ್ರಾಂತಿಯೂ ಇಲ್ಲ. ಡಿಸೆಂಬರ್ ಕ್ರಾಂತಿಯೂ ಇಲ್ಲ, ಜನವರಿ… ಫೆಬ್ರುವರಿ ಯಾವುದೂ ಇಲ್ಲ. ಬದಲಾಗಿ 2028ಕ್ಕೆ ರಾಜ್ಯದಲ್ಲಿ ಮರಳಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕ್ರಾಂತಿ ಆಗಲಿದೆ ಎಂದು ಹೇಳಿದರು.
ಹೈಕಮಾಂಡ್ ಹೇಳಿದಂತೆ ಕೇಳುವುದಷ್ಟೇ ನನ್ನ ಕೆಲಸ. ಎಷ್ಟು ವರ್ಷ ಮುಖ್ಯಮಂತ್ರಿ ಆಗಿರಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ನಮಗೆ ವಹಿಸಿದ ಕೆಲಸವನ್ನು ನಾವು ಮಾಡಿಕೊಂಡು ಹೋಗುತ್ತೇವೆ. 2026ಕ್ಕೂ ಯಾವ ಕ್ರಾಂತಿಯೂ ಆಗುವುದಿಲ್ಲ ಎಂದೂ ಒತ್ತಿ ಹೇಳಿದರು.

