ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಕೋರಿ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಸುಪ್ರೀಂಗೆ ಸೌಜನ್ಯ ಸಾವಿನ ಕುರಿತ ವೈದ್ಯಕೀಯ ವರದಿಯನ್ನು ಸಲ್ಲಿಸಲಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
2012ರಲ್ಲಿ ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯ ಒದಗಿಸುವಂತೆ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಸೌಜನ್ಯ ತಾಯಿ ತನ್ನ ಮಗಳ ಸಾವಿನ ನ್ಯಾಯಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

