ಲಖನೌ: ಕುರಾನ್ ಮತ್ತು ಪ್ರವಾದಿ ಮುಹಮ್ಮದ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಕ್ಕಾಗಿ ಉತ್ತರಪ್ರದೇಶದ ಶಹಜಹಾನ್ ಪುರದಲ್ಲಿ ನಡೆದ ಗಲಭೆಗಳಲ್ಲಿ ಭಾಗವಹಿಸಿ ಪ್ರಚೋದನೆ ನೀಡಿದ ಸುಮಾರು 200ಕ್ಕೂ ಹೆಚ್ಚು ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ.
ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ 45 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ಈತನ ಬಂಧನದ ನಂತರ ಪ್ರತಿಭಟನೆಗಳು ನಡೆದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನಕಾರರು ಶಹಜಾನ್ ಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ವೇಶಿಸಲು ಪ್ರಯತ್ನಿಸಿದರು ಮತ್ತು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಬಳಿಕ ಪ್ರತಿಭಟನೆ ಹಿಂಸೆಗೆ ತಿರುಗಿತ್ತು.
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದರು. ಮಹಿಳೆಯ ಪೋಸ್ಟ್ ಅನ್ನು ಹಂಚಿಕೊಂಡ ವ್ಯಕ್ತಿಗಳ ವಿರುದ್ಧವು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಗಲಭೆಗೆ ಪ್ರಚೋದನೆ ನೀಡಿದವರು ಹಾಗೂ ಪ್ರತಿಭಟನಾಕಾರರನ್ನು ಗುರುತಿಸಲು ತಂಡವನ್ನು ರಚಿಸಲಾಗಿದೆ ಶಹಜಹಾನ್ ಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಹೇಳಿದ್ದಾರೆ.