ಅಕ್ಟೋಬರ್‌ 11ರಂದು ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಅಕ್ಟೋಬರ್ 21 ರಂದು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ

ಬೆಂಗಳೂರು : ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಅಕ್ಟೋಬರ್‌ 11 ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಲನೆ ಸಿಗಲಿದೆ.

ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ‘ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026 ಆಚರಣೆ’ ಸಂಬಂಧ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡು, ಚರ್ಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಾ. ಯತೀಂದ್ರ ಸಿದ್ದರಾಮಯ್ಯ, ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು‌.

  • ಅಕ್ಟೋಬರ್ 11ರಂದು ಉದ್ಘಾಟಕರನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಅಕ್ಟೋಬರ್ 19 ರಂದು ಆಯುಧ ಪೂಜೆ, ಅಕ್ಟೋಬರ್ 21 ರಂದು ದಸರಾದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಅಥವಾ ಜಂಬೂ ಸವಾರಿ ನಡೆಯಲಿದೆ. ಅಂದು ಮಧ್ಯಾಹ್ನ 4:10ಕ್ಕೆ ಶುಭ ‘ಮೀನಾ ಲಗ್ನ’ದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಂತರ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪುಷ್ಪಾರ್ಚನೆ ಮಾಡಲಿದ್ದಾರೆ.

  • ದಸರಾ ಆನೆಗಳ ಆಗಮನ ಅಥವಾ ‘ಗಜಪಯಣ’ಕ್ಕೆ ಜುಲೈ 26 ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ. ಕಾಡಿನಿಂದ ನಾಡಿಗೆ ಬರುವ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರುವ ಮೂಲಕ ದಸರಾ ಉತ್ಸವ ಕಳೆಗಟ್ಟಲಿವೆ.

  • ಈ ಬಾರಿಯ ದಸರಾವನ್ನು ಅತ್ಯಂತ ವೈಭವ ಹಾಗೂ ಜನಸ್ನೇಹಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ರೈತ ದಸರಾ ಹಾಗೂ ಫಲಪುಷ್ಪ ಪ್ರದರ್ಶನಗಳಿಗೆ ಹೊಸ ಕಳೆ ನೀಡಲು ಸರ್ಕಾರ ನಿರ್ಧರಿಸಿದೆ.
  • ಮೈಸೂರು ನಗರದಾದ್ಯಂತ ಕಣ್ಮನ ಸೆಳೆಯುವ ವಿದ್ಯುತ್ ದೀಪಾಲಂಕಾರವನ್ನು ಮತ್ತಷ್ಟು ವಿಸ್ತರಿಸಲು ಹಾಗೂ ಪ್ರವಾಸಿಗರ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲು ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇನ್ನು ದಸರಾ ಉದ್ಘಾಟಕರ ಹೆಸರನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
  • ವಿಧಾನಸೌಧದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಪ್ರಮುಖರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉನ್ನತಾಧಿಕಾರಿಗಳು ಭಾಗವಹಿಸಿದ್ದರು. ಎಲ್ಲರೂ ಒಮ್ಮತದಿಂದ ದಸರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯವಿರುವ ಸಲಹೆ ಹಾಗೂ ತಂತ್ರಜ್ಞಾನದ ನೆರವನ್ನು ಹಂಚಿಕೊಂಡಿದ್ದಾರೆ.

More articles

Latest article

Most read