ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಶಾಸಕ ವಿಜಯೇಂದ್ರ ಕಿಡಿ

Most read

ಇದ್ದಕ್ಕಿದ್ದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳನ್ನು (petrol diesel price hike) ಏರಿಸಿರುವ ರಾಜ್ಯ ಸರಕಾರದ (Karnataka Govt) ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ (BJP) ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ (protest) ನಡೆಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಹಾಗೂ ಬೆಂಗಳೂರು, ಮಂಡ್ಯ, ಹಾವೇರಿ, ಕಲಬುರಗಿ, ಬೆಳಗಾವಿ ರಾಜ್ಯದ ನಾನಾ ಕಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಸುತ್ತಿದೆ. ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಡೆತ್‌ ನೋಟ್‌ ಬರೆದು ಬೈಕ್‌ ಆತ್ಮಹತ್ಯೆಗೆ ಶರಣಾದಂತೆ ಅಣಕು, ಕತ್ತರಿ ಹಿಡಿದು ಕಾಂಗ್ರೆಸ್‌ ವಿರುದ್ದ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಚೊಂಬು ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.

ಅಶೋಕ್‌, ವಿಜಯೇಂದ್ರ ನೇತೃತ್ವದಲ್ಲಿ ಹಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗಿದೆ. ನಾರಾಯಣ, ಸಿ.ಕೆ ರಾಮಮೂರ್ತಿ. ಎಸ್.ರಘು, ಛಲವಾದಿ ನಾರಾಯಣಸ್ವಾಮಿ ಭಾಗಿ. MLC ರವಿಕುಮಾರ್‌, ಮಾಜಿ ಕಾರ್ಪೊರೇಟರಗಳು. ರೈತ ಮೋರ್ಚಾ ಅಧ್ಯಕ್ಷರು ಸೇರಿ ಹಲವರು ಭಾಗಿಯಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಗ್ಯಾರಂಟಿ ಬಗ್ಗೆ ಸಾಕಷ್ಟು ಪ್ರಚಾರ ತೆಗೆದುಕೊಂಡಿದೆ. ಗ್ಯಾರಂಟಿ ಬಗ್ಗೆ ಸಾಧನೆ ಅಂತ ಬಿಂಬಿಸಿಕೊಂಡಿದೆ. ಮತ್ತೊಂದು ಕಡೆ ರಾಜ್ಯದ ಜನರಿಗೆ ಬರೆ ಎಳೆಯುತ್ತಿದೆ. ಸ್ಟ್ಯಾಂಪ್ ಡ್ಯೂಟಿ ಜಾಸ್ತಿ ಮಾಡಿದೆ. ಲೋಕಸಭಾ ಚುನಾವಣೆ ಬಳಿಕ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಿಸಿದೆ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ತಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೂರಿದ್ದಾರೆ.

More articles

Latest article