ಮತ್ತೆ ಮೂರನೇ ಬಾರಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆ ಸ್ಪೀಕರ್ ಹುದ್ದೆಗೆ ಮತ್ತೆ ಓಂ ಬಿರ್ಲಾ ನಾಮಪತ್ರ ಸಲ್ಲಿಸಲಿದ್ದಾರೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಸಭೆಯ ಬಳಿಕ ಸ್ಪೀಕರ್ ಹುದ್ದೆಗೆ ಓಂ ಬಿರ್ಲಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
17ನೇ ಲೋಕಸಭೆಯಲ್ಲಿ ಓಂ ಬಿರ್ಲಾ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು. ಈಗ ಅವರನ್ನೇ ಪುನಃ ಆಯ್ಕೆ ಮಾಡಲಾಗುತ್ತದೆ. ಜೂನ್ 26ರಂದು ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ.
ಏತನ್ಮಧ್ಯೆ, ಕಾಂಗ್ರೆಸ್ ಸಂಸದ ಕೆ ಸುರೇಶ್ ಅವರು (ಇಂಡಿಯಾ) ಮೈತ್ರಿಕೂಟ ಅಭ್ಯರ್ಥಿಯಾಗಿ ಸ್ಪೀಕರ್ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.