ಸತತ 10 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವುದು ಸ್ಪಷ್ಟವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಣೆ ಮಾಡಿದ್ದಾರೆ.
ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿ ಇಂದು ಘೋಷಿಸಿದ್ದು, “10 ವರ್ಷಗಳ ನಂತರ, ಜನರು ನಮಗೆ ತಮ್ಮ ಜನಾದೇಶವನ್ನು ನೀಡಿದ್ದಾರೆ, ನಾವು ಅವರ ನಿರೀಕ್ಷೆಗಳನ್ನು ಈಡೇರಿಸುವಂತೆ ನಾವು ಅಲ್ಲಾಹನಲ್ಲಿ ಪ್ರಾರ್ಥಿಸುತ್ತೇವೆ. ಇನ್ನೂ ಮುಂದೆ ಇದು ‘ಪೊಲೀಸ್ ರಾಜ್ಯ’ ಆಗುವುದಿಲ್ಲ. ನಾವು ಅಮಾಯಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಪ್ರಯತ್ನಿಸುತ್ತೇವೆ. ಮಾಧ್ಯಮಗಳು ನಾವು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ” ಎಂದು ತಿಳಿಸಿದರು.
ಉನ್ನತ ಹುದ್ದೆಯನ್ನು ಯಾರಿಗೆ ನೀಡಲಾಗುವುದು ಎಂದು ಕೇಳಿದಾಗ, ಹಿರಿಯ ರಾಜಕಾರಣಿ, “ಒಮರ್ ಅಬ್ದುಲ್ಲಾ ಬನೇಗಾ ಮುಖ್ಯಮಂತ್ರಿ” ಎಂದು ಘೋಷಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.