Wednesday, December 11, 2024

ಜಮ್ಮು – ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

Most read

ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಜನ ಗಳಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ, ಈಗ ಅಧಿಕೃತವಾಗಿ ಅಧಿಕಾರವನ್ನು ವಹಿಸಿಕೊಂಡಿದೆ. ಈ ನಿಟ್ಟಿನಲ್ಲಿ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

2019 ರಲ್ಲಿ ಆರ್ಟಿಕಲ್ 370 ರದ್ದತಿ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಒಮರ್ ಜಮ್ಮು ಮತ್ತು ಕಾಶ್ಮೀರದ ನೂತನ ಮತ್ತು ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಮತ್ತು ಅವರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

More articles

Latest article