ಗುಜರಾತ್:‌ ಶಿವರಾತ್ರಿಯಂದೇ ಶಿವಲಿಂಗ ಕಳ್ಳತನ

Most read

ಗಾಂಧಿನಗರ: ಗುಜರಾತ್‌ನ ದ್ವಾರಕಾ ಜಿಲ್ಲೆಯ ಭಿದ್ಭಂಜನ ಭವಾನೀಶ್ವರ ಮಹಾದೇವ ದೇವಸ್ಥಾನದಲ್ಲಿ ಶಿವರಾತ್ರಿ ಆಚರಿಸುವ ಇಂದೇ  ಶಿವಲಿಂಗವನ್ನು ಕಳ್ಳತನ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ ಎಂದು ಅಲ್ಲಿನ ಸುದ್ದಿಸಂಸ್ಥೆಗಳು ತಿಳಿಸಿವೆ.

ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ದ್ವಾರಕಾ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ ತಿಳಿಸಿದ್ದಾರೆ. ಆದರೆ ಕಳ್ಳತನವಾಗಿರುವ ವಿಗ್ರಹವನ್ನು ದುಷ್ಕರ್ಮಿಗಳು ಸಮೀಪದ ಸಮುದ್ರದಲ್ಲಿ ಅಡಗಿಸಿಟ್ಟಿರುವ ಸಾಧ್ಯತೆಗಳಿವೆ. ಹೀಗಾಗಿ ಸ್ಕೂಬಾ ಡೈವಿಂಗ್‌ ಮೂಲಕ ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪಾಂಡೆ ತಿಳಿಸಿದ್ದಾರೆ.

More articles

Latest article