ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನಡೆಸಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬೆಂಬಲ ನೀಡಿದರು.
ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಿಖಿಲ್ ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ಕಾರ್ಯಕರ್ತರು ಪಾದಯಾತ್ರೆಯು ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯಿಂದ ಮೈಸೂರು ರಸ್ತೆ ನೈಸ್ ಜಂಕ್ಷನ್ ವರೆಗೆ ಇಂದು 16 ಕಿಲೋಮೀಟರ್ ನಡೆಯಲಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿ, ಡಿ.ಕೆ ಶಿವಕುಮಾರ್ ಡಿಸಿಎಂ ಆಗಿದ್ದಾಗ ಅವರೇ ಉಸ್ತುವಾರಿ, ಆಗ ಏಕೆ ಮಾಡಿಲ್ಲ. ಇಷ್ಟು ವರ್ಷ ಇಲ್ಲದ ಟೌನ್ಶಿಪ್ನ್ನು ಈಗ ಏಕೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 20,000ಕ್ಕಿಂತ ಹೆಚ್ಚು ಬಿಡಿಎ ಸೈಟ್ ಖಾಲಿ ಬಿದ್ದಿದೆ. ಹೆಚ್.ಡಿ.ಕುಮಾರಸ್ವಾಮಿ ಟೌನ್‌ಶಿಪ್ ಯೋಜನೆ ಘೋಷಣೆ ಮಾಡಿದ್ದರು. ನಾವು ಈಗ ಮುಂದುವರಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಕುಮಾರಸ್ವಾಮಿ ಅವರ ಟೌನ್‌ಶಿಪ್ ಕೂಸನ್ನು ಅಬಾರ್ಷನ್ ಮಾಡಿದ್ದು ಕಾಂಗ್ರೆಸ್ ಎಂದರು.
ನಿನ್ನೆ, ಪಾದಯಾತ್ರೆಯ ಮೊದಲ ದಿನ ಏಳು ಕಿಲೋಮೀಟರ್ ಕ್ರಮಿಸಲಾಗಿತ್ತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆರ್. ಅಶೋಕ್ ನಿನ್ನೆ ಪಾದಯಾತ್ರೆಗೆ ಚಾಲನೆ ನೀಡಿದ್ದರು.

