ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ ಐಆರ್‌

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ಪಡೆದಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ  ವಿರುದ್ಧ ಶನಿವಾರ ಮತ್ತೊಂದು ಎಫ್ಐಆರ್​ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪಿಸಿ ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ಮಂಜುಳಾ ಪತಿ ನಾರಾಯಣಸ್ವಾಮಿ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಮೂಲಕ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್‌ ಸಿದ್ದಪಡಿಸಿದ್ದು, ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇದೇ ದಿನವೇ ಮತ್ತೊಂದು ಎಫ್ಐಆರ್  ದಾಖಲಾಗಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.  ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಶಾಸಕ ಮುನಿರತ್ನ ಅವರದ್ದೇ ಎನ್ನುವುದು  ದೃಢಪಟ್ಟಿದೆ.

More articles

Latest article

Most read