ಕೇಂದ್ರದ ವಿರುದ್ಧ ತೊಡೆತಟ್ಟಿದ ಕಾಂಗ್ರೆಸ್ ಸರ್ಕಾರ; ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇಮಾತರಂ 2 ಚರಣ ಮಾತ್ರ

ಬೆಂಗಳೂರು: ‘ವಂದೇ ಮಾತರಂ’ ಗೀತೆಯ ವಿಚಾರವಾಗಿ ಕರ್ನಾಟಕದಲ್ಲಿ ಮತ್ತೆ ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿಯ ಆರು ಚರಣಗಳನ್ನು ಹಾಡುವ/ನುಡಿಸುವ ಕುರಿತು ಹೊಸ ಶಿಷ್ಟಾಚಾರ ಜಾರಿಗೆ ತಂದಿರುವ ಬೆನ್ನಲ್ಲೇ, ಕರ್ನಾಟಕ ಸರ್ಕಾರ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿಲುವನ್ನು ಮುಂದುವರಿಸಿದೆ.

ಕೇಂದ್ರ ಗೃಹ ಸಚಿವಾಲಯ 2026ರ ಜನವರಿಯಲ್ಲಿ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಅಧಿಕೃತ ಸಂದರ್ಭಗಳಲ್ಲಿ ‘ವಂದೇ ಮಾತರಂ’ನ ಆರು ಚರಣಗಳ ಆವೃತ್ತಿಯನ್ನು ಹಾಡಲು ಅಥವಾ ನುಡಿಸಲು ಸೂಚಿಸಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರಂತಹ ಗಣ್ಯರ ಅಧಿಕೃತ ಕಾರ್ಯಕ್ರಮಗಳು, ಧ್ವಜಾರೋಹಣ ಸೇರಿದಂತೆ ಪ್ರಮುಖ ಸರ್ಕಾರಿ ಕಾರ್ಯಕ್ರಮಗಳಲ್ಲಿ ಈ ಪ್ರೋಟೋಕಾಲ್ ಅನ್ವಯಿಸುತ್ತದೆ.

ಆದರೆ ಕಾಂಗ್ರೆಸ್ 1937ರ ತನ್ನ ನಿಲುವನ್ನು ಪುನರುಚ್ಚರಿಸಿದ್ದು, ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಇದೇ ನಿಲುವಿಗೆ ಬದ್ಧರಾಗಿರುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಮೊದಲ ಎರಡು ಚರಣಗಳನ್ನೇ ಹಾಡುವುದಾಗಿ ಅವರು ಹೇಳಿದ್ದಾರೆ.

ಹೀಗಾಗಿ ಕೇಂದ್ರದ ಆರು ಚರಣಗಳ ಪ್ರೋಟೋಕಾಲ್‌ಗೆ ವಿರುದ್ಧವಾಗಿ ಕರ್ನಾಟಕದಲ್ಲಿ ಎರಡು ಚರಣಗಳ ಪದ್ಧತಿ ಮುಂದುವರಿಯಲಿದ್ದು, ‘ವಂದೇ ಮಾತರಂ’ ವಿಚಾರ ಮತ್ತೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

ಕೇಂದ್ರದ ಮಾರ್ಗಸೂಚಿ ಮತ್ತು ರಾಜ್ಯ ಸರ್ಕಾರದ ನಿಲುವಿನ ನಡುವೆ ಉಂಟಾಗಿರುವ ಈ ವ್ಯತ್ಯಾಸ ಮುಂದಿನ ದಿನಗಳಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

More articles

Latest article

Most read