ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ “ಸುರಕ್ಷ ಪಾದಚಾರಿ ಮಾರ್ಗ ಅಭಿಯಾನ” ದಡಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯು ಇಂದಿನಿಂದ ಆರಂಭವಾಗಿದೆ. ನಗರ ಪಾಲಿಕೆವಾರು ಪ್ರಮುಖ ರಸ್ತೆಗಳಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ.
ಬೆಳಗ್ಗೆ 10 ಗಂಟೆಯಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಜೆಸಿಬಿ ವಾಹನಗಳ ಮೂಲಕ ತೆರವು ಮಾಡಲಾಗುತ್ತಿದೆ. ಜಯನಗರದ ಅಶೋಕ ಪಿಲ್ಲರ್ ಸಮೀಪದಲ್ಲಿ ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್ಪಾತ್ಗಳನ್ನು ತೆರವುಗೊಳಿಸಲಾಗುತ್ತಿದೆ.
ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮತ್ತೆ ಒತ್ತುವರಿ ಮಾಡದಂತೆ ನಿಗಾ ವಹಿಸಲು ಜಿಬಿಎ ಎಚ್ಚರಿಕೆ ವಹಿಸುತ್ತಿದೆ.
ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಿ ಜಗದೀಶ್ ರವರು ಇಂದು ಓಕಳೀಪುರಂ 5ನೇ ಮುಖ್ಯ ರಸ್ತೆ ಹಾಗೂ ಮೆಜೆಸ್ಟಿಕ್ ಬಳಿ ನಡೆಯುತ್ತಿರುವ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
* ಟ್ರಿನಿಟಿ ಜಂಕ್ಷನ್ ನಿಂದ ಎಂಜಿ ರಸ್ತೆ, ಎಂಜಿ ಉದ್ಯಾನದ ವರೆಗೆ
* 100 ಅಡಿ ಇಂದಿರಾನಗರದಿಂದ ದೊಮ್ಮಲೂರು ಫ್ಲೈಓವರ್
* ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಬೆನಗನಹಳ್ಳಿ ರೈಲ್ವೇ ಸೇತುವೆ ವರೆಗೆ
* ಅಶೋಕ್ ಪಿಲ್ಲರ್ ಇಂದ ಮಾದಚನ್ ಪಾರ್ಕ್
* 8ನೇ ಮುಖ್ಯ ರಸ್ತೆ ಕನಕನಪಾಳ್ಯ ರಸ್ತೆಯಿಂದ 15ನೇ ಅಡ್ಡ ರಸ್ತೆ ಜಯನಗರ
* 9ನೇ ಮುಖ್ಯ ರಸ್ತೆ ಕನಕನಪಾಳ್ಯ ರಸ್ತೆಯಿಂದ 15ನೇ ಅಡ್ಡ ರಸ್ತೆ ಜಯನಗರ
* ಆರ್. ವಿ ರಸ್ತೆ ಟೀಚರ್ಸ್ ಕಾಲೇಕಿನಿಂದ ಸೌತ್ ಎಂಡ್ ಸರ್ಕಲ್ ವರೆಗೆ

