ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Most read

ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸುತ್ತಿದೆ.‌

ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸಿ.ಎಂ. ಇರ್ಫಾನುಲ್ಲಾ ಷರೀಫ್ ಹಾಗೂ ಕಲಬುರಗಿಯ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಿಣಿ ಅಪ್ಪಾ ಗೌರವ ಡಾಕ್ಟರೇಟ್ ಪಡೆದ ಸಾಧಕರು.

ಗುರುವಾರ ಮೈಸೂರಿನ ಮುಕ್ತ ವಿ.ವಿ.‌ ಭವನದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಇಪ್ಪತ್ತನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿ ವಿ. ಶರಣಪ್ಪ ಹಲಸೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ 17,307 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ.  ಸತೀಶ್‌ ಜಾರಕಿಹೊಳಿ ಅವರ ಸಮಾಜಸೇವೆಯನ್ನು ಗುರುತಿಸಿ ಡಾಕ್ಟರೇಟ್‌ ಪ್ರಧಾನ ಮಾಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

More articles

Latest article