ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ ನಡೆಸಲು ಉದ್ದೇಶಿಸಲಾಗಿದ್ದ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪಾಕ್ ದಾಳಿ ನಡೆಸುವ ಮುನ್ಸೂಚನೆ ಅರಿತ ಭಾರತೀಯ ಸೇನೆ ಎಸ್-400 ಕ್ಷಿಪಣಿಯನ್ನು ಬಳಸಿ ಲಾಹೋರ್ ನಲ್ಲಿ ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಧ್ವಂಸಗೊಳಿಸಿದೆ. ಈ ಯಶಸ್ಸಿನ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದೆ.
ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಪಡೆದುಕೊಂಡಿತ್ತು. ಭಾರತದ ದಾಳಿಯಲ್ಲಿ HQ-9 ಏರ್ ಡಿಫೆನ್ಸ್ ಸಿಸ್ಟಮ್ ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಪಾಕಿಸ್ತಾನದ ಕ್ಷಿಪಣಿಗಳ ಅವಶೇಷಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.
ಭಾರತದ ಇನ್ನೂ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿಗೆ ಪಾಕಿಸ್ತಾನ ಸಜ್ಜಾಗಿತ್ತು. ಭಾರತೀಯ ಸೇನೆ ಇಂದು ಮತ್ತೆ ಪಾಕಿಸ್ತಾನದೊಳಗೆ ನುಗ್ಗಿ ಈ ದಾಳಿಯನ್ನು ವಿಫಲಗೊಳಿಸಿದೆ. ಈ ಮೂಲಕ ಆಪರೇಷನ್ ಸಿಂಧೂರವನ್ನು ಮುಂದುವರೆಸಿದೆ. ಪಾಕಿಸ್ತಾನದ ಲಾಹೋರ್, ಕರಾಚಿ, ಸಿಯೋಲ್ ಕೋಟ್ ಮೇಲೆ ದಾಳಿ ನಡೆಸಲಾಗಿದೆ.
ಭಾರತದ ಚಂಡೀಗಢ, ಆವಂತಿಪೊರ, ಜಲಂಧರ್, ಲೂಧಿಯಾನ, ಅಮೃತಸರ, ಪಠಾಣಕೋಟ್, ಕಪೂರ್ತಲಾ, ನಲ, ಫಲೋಡಿ, ಉತ್ತರಲೈ, ಭುಜ್, ಜಮ್ಮು, ಶ್ರೀನಗರ, ಆಧಂಪುರ, ಭಟಿಂಡಾ ಮೇಲೆ ದಾಳಿಗೆ ಪಾಕಿಸ್ತಾನ ಸಂಚು ರೂಪಿಸಿತ್ತು ಎಂದೂ ಹೇಳಲಾಗುತ್ತಿದೆ.