ಪಹಲ್ಗಾಮ್‌ ಗೆ ಪ್ರತೀಕಾರ: ಆಪರೇಷನ್ ಸಿಂಧೂರ ಕಾರ್ಯಾಚರಣೆ; 9 ಉಗ್ರ ನೆಲೆಗಳ ಮೇಲೆ ಕ್ಷಿಪಣಿ ದಾಳಿ

Most read

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. ಪಹಲ್ಗಾಮ್‌ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ ಭಾರತ ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ಈ ದಾಳಿಯಲ್ಲಿ ಕೆಲವು ಭಯೋತ್ಪಾದಕರು ಮೃತಪಟ್ಟಿರುವ ಸಾಧ್ಯತೆಗಳಿವೆ.

ಕೆಲವೇ ಹೊತ್ತಿನ ಹಿಂದೆ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ಭಾರತೀಯ ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಒಂಬತ್ತು ತಾಣಗಳ ಮೇಲೆ ದಾಳಿ ಮಾಡಲಾಗಿದೆ. ಈ ನಿಖರ ದಾಳಿಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ತಿಳಿದು ಬಂದಿದೆ.

ಆಪರೇಷನ್ ಸಿಂಧೂರ್ ಎಂದರೇನು?

ಭಾರತದ ಆಪರೇಷನ್ ಸಿಂಧೂರ್ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ದಾಳಿ ನಡೆಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, 9 ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಈ  ಸ್ಥಳಗಳಿಂದಲೇ ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸುತ್ತಿದ್ದವು ಎನ್ನಲಾಗಿದೆ.

ಪಾಕಿಸ್ತಾನದ ಸೇನೆಯು ಆರು ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ –ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‌ ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟ್ಲಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯದ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ದಾಳಿ ನಡೆಸಿ ತಿರುಗೇಟು ನೀಡಿದೆ. ಲಷ್ಕರ್‌–ಎ–ತಯಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅಹ್ಲೆ ಹದಿತ್ ಮತ್ತು ಮುಜಫರಾಬಾದ್‌ನ ಶ್ವವಾಯಿ ನಲ್ಲಾ ಮೇಲೂ ದಾಳಿ ನಡೆದಿದೆ.

ತಡರಾತ್ರಿ 1.44ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದೆ.  ಈ ದಾಳಿಯು ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ದಾಳಿಗೆ ಆಯ್ದುಕೊಂಡ 9 ಸ್ಥಳಗಳಲ್ಲಿ 4 ಪಾಕಿಸ್ತಾನದಲ್ಲಿದ್ದರೆ ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ.

ಇದನ್ನೂ ಓದಿ:

More articles

Latest article