ಆಪರೇಷನ್ ಸಿಂಧೂರ: ನಷ್ಟಕ್ಕಿಂತ ಲಾಭ ಹೆಚ್ಚು; ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್

Most read

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತಕ್ಕೆ ಆದ ಹಾನಿಯ ಬಗ್ಗೆ ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಅನಿಲ್ ಚೌಹಾಣ್ ಇಂದು ಮತ್ತೊಮ್ಮೆ ಪ್ರತಿಕ್ರಿಯಿಸಿದ್ದಾರೆ. ನಷ್ಟ ಎಷ್ಟಾಯಿತು ಎಂಬುವುದು ಮುಖ್ಯವಲ್ಲ. ಬದಲಾಗಿ ಕಾರ್ಯಾಚರಣೆಯ ಫಲಿತಾಂಶ ಮುಖ್ಯ ಎಂದು ಅವರು ಹೇಳಿದ್ದಾರೆ.

ಅವರು ಪುಣೆಯ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದಲ್ಲಿ ”Future Wars and Warfare’ ಕುರಿತು ಉಪನ್ಯಾಸ ನೀಡುತ್ತಾ ಈ ವಿಷಯ ತಿಳಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಮಯದಲ್ಲಿ ಉಂಟಾದ ನಷ್ಟ ಫಲಿತಾಂಶಕ್ಕೆ ಹೋಲಿಸಿದರೆ ಗೌಣ ಎಂದು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಅವರು, ‘ಇದು ಅತ್ಯಂತ ಕ್ರೌರ್ಯ ಕೃತ್ಯ. ಆಧುನಿಕ ಜಗತ್ತಿಗೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಪಾಕಿಸ್ತಾನದ ಜೊತೆ ಈಚೆಗೆ ನಡೆದ ಮಿಲಿಟರಿ ಸಂಘರ್ಷದ ಸಂದರ್ಭದಲ್ಲಿ ಭಾರತವು ಕೆಲವು ಯುದ್ಧವಿಮಾನಗಳನ್ನು ಕಳೆದುಕೊಂಡಿದೆ ಎಂಬುದನ್ನು ಅನಿಲ್ ಚೌಹಾಣ್ ಶನಿವಾರ ಒಪ್ಪಿಕೊಂಡಿದ್ದರು. ಆದರೆ, ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನ ಹೇಳಿರುವುದು ಸಂಪೂರ್ಣ ಸುಳ್ಳು ಎಂದು ಅವರು ಬ್ಲೂಮ್ಬರ್ಗ್ ಟಿವಿಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದರು.

More articles

Latest article