ನವದೆಹಲಿ: ತಮ್ಮ ನಾಯಕತ್ವ ಕುರಿತು ಹೆಚ್ಚುತ್ತಿರುವ ಟೀಕೆಗಳು ಮತ್ತು ಪ್ರಶ್ನೆಗಳಿಂದ ದೇಶದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳಿಗೆ ವಿಪಕ್ಷಗಳ ನಿಯೋಗಗಳನ್ನು ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 34 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ʼಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರತಿ ಅಕ್ಟೋಬರ್ ನವೆಂಬರ್‌ನಲ್ಲಿ ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆಗೆ ವಿವಿಧ ಪಕ್ಷಗಳ ಸಂಸದರನ್ನು ಕಳುಹಿಸುವ ಪದ್ಧತಿ 1950 ರ ದಶಕದಿಂದಲೂ ಜಾರಿಯಲ್ಲಿದೆ. ಆದರೆ, 2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಈ ಸಂಪ್ರದಾಯವನ್ನು ನಿಲ್ಲಿಸಲಾಗಿತ್ತು.
ಈಗ ಅವರು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜೀವ್ ಗಾಂಧಿಯವರ “ಮಾನವೀಯತೆ, ಒಳ್ಳೆಯತನ ಮತ್ತು ಸಭ್ಯತೆ ಗುಣಗಳು ಪ್ರಸ್ತುತ ಪ್ರಧಾನಿಯಲ್ಲಿ ಕಾಣೆಯಾಗಿದೆ. ಮಾಜಿ ಪ್ರಧಾನಿ ವಾಜಪೇಯಿ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದರೂ ಅವರಿಗೆ ವಿದೇಶದಲ್ಲಿ ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ಮಾಡಿದ ಹಾಗೂ ಚಿಕಿತ್ಸೆ ಬಗ್ಗೆ ವಾಜಪೇಯಿಯವರು ಮಾತನಾಡಿರುವ ವಿಡಿಯೋವನ್ನು ಜೈರಾಂ ರಮೇಶ ಹಂಚಿಕೊಂಡಿದ್ದಾರೆ.