ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ವಿಡಿಯೋ ದುರ್ಬಳಕೆ: ಯೂಟ್ಯೂಬರ್ಸ್‌, ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಕ್ರಮಕ್ಕೆ ಆದೇಶ

ಬೆಂಗಳೂರು ಅ.2: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ನ್ಯಾಯಾಲಯದ ಕಲಾಪದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆರೋಪಕ್ಕೆ ಸಂಬಂಧಿಸಿದಂತೆ 59ನೇ ಸಿಸಿಎಚ್ ನ್ಯಾಯಾಲಯ ಗಂಭೀರ ಕ್ರಮಕ್ಕೆ ಮುಂದಾಗಿದೆ.

ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ಅತ್ಯಂತ ಸೂಕ್ಷ್ಮ ಹಂತದಲ್ಲಿರುವ ಸಂದರ್ಭದಲ್ಲಿ, ನ್ಯಾಯಾಲಯದ ಕಲಾಪದ ದೃಶ್ಯಗಳನ್ನು ಸ್ಕ್ರೀನ್ ರೆಕಾರ್ಡ್ ಮಾಡಿ ಯೂಟ್ಯೂಬ್ ಚಾನೆಲ್‌ಗಳು ಹಾಗೂ ವಿವಿಧ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬೆಳವಣಿಗೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ನ್ಯಾಯಾಲಯದ ಕಲಾಪದ ವಿಡಿಯೋಗಳನ್ನು ರೆಕಾರ್ಡ್ ಮಾಡುವುದು ಅಥವಾ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಕ್ಕೆ ಈಗಾಗಲೇ ನಿರ್ಬಂಧವಿದ್ದರೂ, ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ.

ಇದರಿಂದ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆಯ ಮೇಲೆಯೂ ಕೋರ್ಟ್ ನಿರ್ಬಂಧ ಹೇರಿದೆ. ವಿಚಾರಣೆಯ ದೃಶ್ಯಗಳು ಅಥವಾ ಹೇಳಿಕೆಯ ಭಾಗಗಳು ಮತ್ತೆ ಹೊರಗೆ ಸೋರಿಕೆಯಾಗದಂತೆ ನ್ಯಾಯಾಲಯ ಮುನ್ನೆಚ್ಚರಿಕೆ ವಹಿಸಿದೆ.

ವಿಡಿಯೋ ಹಂಚಿಕೆ ಮಾಡಿರುವ ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ನ್ಯಾಯಾಲಯದ ಕಲಾಪದ ದೃಶ್ಯಗಳನ್ನು ದುರ್ಬಳಕೆ ಮಾಡಿಕೊಂಡು ವೈರಲ್ ಮಾಡಿದವರ ವಿರುದ್ಧ ಕ್ರಮ ಜರುಗುವ ಸಾಧ್ಯತೆ ಇದೆ.

ಪ್ರದೋಷ್ ಅವರು ಈ ಪ್ರಕರಣದಲ್ಲಿ ಈ ಹಿಂದೆ 14ನೇ ಆರೋಪಿಯಾಗಿದ್ದರು. ಆಗಸ್ಟ್‌ನಲ್ಲಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 16ರಂದು 59ನೇ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಅವರ ಅರ್ಜಿಯನ್ನು ಅಂಗೀಕರಿಸಿ, ಸಂಪೂರ್ಣ ಹಾಗೂ ಸತ್ಯವಾದ ಮಾಹಿತಿ ನೀಡಬೇಕು ಎಂಬ ಷರತ್ತಿನೊಂದಿಗೆ ಅವರನ್ನು ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಪರಿಗಣಿಸಿತ್ತು.

ಸೆಪ್ಟೆಂಬರ್ 28ರಂದು ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನ ಹಲವು ಗಂಟೆಗಳ ಕಾಲ ಹೇಳಿಕೆ ದಾಖಲಿಸಲಾಯಿತು. ನಂತರದ ದಿನವೂ ಇನ್-ಕ್ಯಾಮರಾ ಪ್ರಕ್ರಿಯೆಯಲ್ಲಿ ಹೇಳಿಕೆ ದಾಖಲಿಸುವುದು ಮುಂದುವರಿದಿದೆ.

More articles

Latest article

Most read