ತಮಿಳುನಾಡಿಗೆ ಮತ್ತೆ 12 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ

ನವದೆಹಲಿ :  ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಮಹತ್ವದ ಶಿಫಾರಸು ಮಾಡಿದೆ.

ಈ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.

ದೆಹಲಿಯಲ್ಲಿರುವ  ಕಚೇರಿಯಲ್ಲಿ ಬೆಳಗ್ಗೆ ಅಧ್ಯಕ್ಷ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ಪ್ರಮುಖ ಸಭೆ ನಡೆಯಿತು. ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಅವರು ಖುದ್ದಾಗಿ ಹಾಜರಿದ್ದು ರಾಜ್ಯದಲ್ಲಿನ ಜಲಾಶಯಗಳ ನೀರಿನ ಮಟ್ಟ ಹಾಗೂ ವಸ್ತುಸ್ಥಿತಿಯನ್ನು ಪ್ರಾಧಿಕಾರದ ಮುಂದಿಟ್ಟಿದ್ದಾರೆ.

ಸುಮಾರು ಒಂದೂವರೆ ಗಂಟೆಗಳ ನಡೆದ ಸಭೆಯಲ್ಲಿ ಭವಿಷ್ಯದ ಮಳೆ, ಈಗ ಜಲಾಶಯದಲ್ಲಿರುವ ನೀರಿನ ಸಂಗ್ರಹ ಎಲ್ಲವನ್ನು ಗಮನದಲ್ಲಿಟ್ಟುಕೊಂಡು CWRC ಈ ಶಿಫಾರಸು ಮಾಡಿದೆ ಎನ್ನಲಾಗಿದೆ. ತಮಿಳುನಾಡು ರಾಜ್ಯದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

More articles

Latest article

Most read