ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ : ರಾಜ್ಯದ ರೈತರ ಹಿತ ಕಾಪಾಡುವಂತೆ ಟಿ.ಎ.ನಾರಾಯಣಗೌಡ ಆಗ್ರಹ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಾಡಿರುವ ಶಿಫಾರಸು ಹಾಗೂ ಈ ಶಿಫಾರಸಿನ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ನಿರ್ಧಾರ ಕರ್ನಾಟಕದ ಪಾಲಿಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕದ ವಾಸ್ತವಿಕ ಪರಿಸ್ಥಿತಿಯನ್ನು, ನಮ್ಮ ರೈತರ ಅಗತ್ಯವನ್ನು ಹಾಗೂ ಮುಂದಿನ ದಿನಗಳ ನೀರಿನ ಭದ್ರತೆಯನ್ನು ಸಮರ್ಪಕವಾಗಿ ಪರಿಗಣಿಸದೆ ಇಂತಹ ನಿರ್ಧಾರ ಕೈಗೊಳ್ಳುತ್ತಿರುವುದು ಅತ್ಯಂತ ಖಂಡನೀಯ. ಹೀಗಾಗಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಒಪ್ಪದೆ, ಕರ್ನಾಟಕದ ರೈತರ ಹಿತವನ್ನು ಕಾಪಾಡಲು ಕೂಡಲೇ ದೃಢವಾದ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ಕಾವೇರಿ ಕರ್ನಾಟಕದ ಜೀವನಾಡಿ. ಈ ನೀರು ಕರ್ನಾಟಕದ ಲಕ್ಷಾಂತರ ರೈತರ ಬದುಕಿನ ಆಧಾರ. ನಮ್ಮ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಕೇವಲ ತಮಿಳುನಾಡಿಗೆ ಹರಿಸಬೇಕಾದ ನೀರಲ್ಲ. ನಮ್ಮ ರೈತರ ಬೆಳೆಗಳಿಗೆ, ನಮ್ಮ ಜನರ ಕುಡಿಯುವ ನೀರಿಗೆ ಮತ್ತು ಮುಂದಿನ ದಿನಗಳ ಅಗತ್ಯಗಳಿಗೆ ಈ ನೀರು ಅತ್ಯಗತ್ಯವಾಗಿದೆ. ಇಂದು ಜಲಾಶಯಗಳಲ್ಲಿ ನೀರು ಇದೆ ಎಂಬ ಕಾರಣಕ್ಕೆ ಸಾವಿರಾರು ಕ್ಯೂಸೆಕ್ ನೀರನ್ನು ನಿರಂತರವಾಗಿ ತಮಿಳುನಾಡಿಗೆ ಹರಿದುಬಿಟ್ಟರೆ, ಮುಂದಿನ ದಿನಗಳಲ್ಲಿ ಮಳೆ ಕೈಕೊಟ್ಟಾಗ ಕರ್ನಾಟಕದ ರೈತರು ಮತ್ತು ಜನರು ಎದುರಿಸಬೇಕಾದ ಪರಿಸ್ಥಿತಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.

CWRC ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿದೆ. 15 ದಿನಗಳ ಕಾಲ ಈ ಪ್ರಮಾಣದ ನೀರು ಹರಿಸಿದರೆ ಒಟ್ಟು ಸುಮಾರು 15.6 ಟಿಎಂಸಿ ನೀರು ತಮಿಳುನಾಡಿನತ್ತ ಹರಿಯಲಿದೆ. ಕರ್ನಾಟಕದ ಜಲಾಶಯಗಳ ನೀರಿನ ಲಭ್ಯತೆ, ಒಳಹರಿವು, ರಾಜ್ಯದ ಕುಡಿಯುವ ನೀರಿನ ಅಗತ್ಯ, ರೈತರ ಕೃಷಿ ಅವಶ್ಯಕತೆ ಹಾಗೂ ಮುಂದಿನ ಮಳೆಯ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಗಣಿಸದೆ ಇಷ್ಟು ದೊಡ್ಡ ಪ್ರಮಾಣದ ನೀರು ಬಿಡುಗಡೆ ಮಾಡುವಂತೆ ಸೂಚಿಸುವುದು ಕರ್ನಾಟಕದ ರೈತರ ಮೇಲೆ ಘೋರ ಅನ್ಯಾಯವೆಸಗಿದಂತಾಗುತ್ತದೆ ಎಂದರು.

ತಮಿಳುನಾಡಿನ ರೈತರ ಬಗ್ಗೆ ನಮಗೆ ಯಾವುದೇ ವಿರೋಧವಿಲ್ಲ. ಆದರೆ ಕರ್ನಾಟಕದ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿನ ಕೃಷಿ ಅಗತ್ಯಗಳನ್ನು ಪೂರೈಸುವುದನ್ನು ನಾವು ಒಪ್ಪುವುದಿಲ್ಲ. ಎರಡೂ ರಾಜ್ಯಗಳ ರೈತರ ಹಿತವನ್ನು ಸಮಾನವಾಗಿ ಪರಿಗಣಿಸಿ, ಸಂಕಷ್ಟದ ವರ್ಷಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ನ್ಯಾಯಯುತವಾಗಿ ನೀರು ಹಂಚಿಕೆ ಮಾಡಬೇಕು. ಕರ್ನಾಟಕದ ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸದೆ ಕೇವಲ ತಮಿಳುನಾಡಿನ ಬೇಡಿಕೆಗೆ ಅನುಗುಣವಾಗಿ ನೀರು ಬಿಡುಗಡೆ ಮಾಡುವುದು ನ್ಯಾಯಸಮ್ಮತವಲ್ಲ.

ಕರ್ನಾಟಕ ಸರ್ಕಾರ ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ದುಡುಕು ತೀರ್ಮಾನ ಕೈಗೊಳ್ಳಬಾರದು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಇಲಾಖೆ ಕೂಡಲೇ ದೃಢವಾದ ನಿಲುವು ತೆಗೆದುಕೊಳ್ಳಬೇಕು. CWRC ಶಿಫಾರಸು ಹಾಗೂ CWMAಯ ನಿರ್ಧಾರದ ವಿರುದ್ಧ ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಕರ್ನಾಟಕದ ವಾಸ್ತವಿಕ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ನ ಮುಂದೆ ಸಮರ್ಥವಾಗಿ ಮಂಡಿಸಿ, ರಾಜ್ಯದ ರೈತರ ಹಿತಾಸಕ್ತಿಗೆ ಧಕ್ಕೆ ಉಂಟಾಗದಂತೆ ಅಗತ್ಯವಿರುವ ನ್ಯಾಯಾಂಗ ಪರಿಹಾರವನ್ನು ಪಡೆಯಬೇಕು ಎಂದರು.

ಸರ್ಕಾರ ಕೇವಲ ಕಾನೂನು ಹೋರಾಟದ ಮಾತು ಹೇಳದೆ, ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಧೈರ್ಯವನ್ನು ತೋರಿಸಬೇಕು. ಸರ್ವಪಕ್ಷ ಸಭೆ ಕರೆದು ಕಾವೇರಿ ವಿಚಾರದಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ಕಾವೇರಿ ಕೊಳ್ಳದ ರೈತರ ಪ್ರತಿನಿಧಿಗಳು, ನೀರಾವರಿ ತಜ್ಞರು ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕು.

ಕರ್ನಾಟಕದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯದ ನೀರನ್ನು ಹೊರಗೆ ಹರಿಸಿ ಅವರ ಬದುಕನ್ನು ಅಪಾಯಕ್ಕೆ ತಳ್ಳಲು ನಾವು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಕ್ಕು ಮತ್ತು ಹಿತಾಸಕ್ತಿಯನ್ನು ರಕ್ಷಿಸಲು ಕರ್ನಾಟಕ ರಕ್ಷಣಾ ವೇದಿಕೆ ಸದಾ ರೈತರ ಪರವಾಗಿ ನಿಲ್ಲಲಿದೆ. ಅಗತ್ಯವಿದ್ದರೆ ರೈತರೊಂದಿಗೆ ಕೈಜೋಡಿಸಿ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ಹೋರಾಟ ನಡೆಸಲು ನಾವು ಸಿದ್ಧರಿದ್ದೇವೆ.

ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು CWRC ಶಿಫಾರಸು ಹಾಗೂ CWMAಯ ನಿರ್ಧಾರದ ವಿರುದ್ಧ ತನ್ನ ಸ್ಪಷ್ಟ ನಿಲುವನ್ನು ಪ್ರಕಟಿಸಬೇಕು. ಯಾವುದೇ ಒತ್ತಡಕ್ಕೂ ಮಣಿಯದೆ ಕರ್ನಾಟಕದ ನೀರು, ರೈತರ ಬದುಕು ಮತ್ತು ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸುವ ದೃಢವಾದ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

More articles

Latest article

Most read