ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ “ಸುರಕ್ಷಿತ ಮಾತೃತ್ವ ಆಶ್ವಾಸನ – SUMAN Roadmap 2030” ರಾಜ್ಯ ಮಟ್ಟದ ಕಾರ್ಯಾಗಾರವನ್ನು ಆರೋಗ್ಯ ಸಚಿವ ಯು.ಟಿ ಖಾದರ್ ಉದ್ಘಾಟಿಸಿದರು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಮರಣ ತಡೆಗಾಗಿ ಹಲವು ಕೇಂದ್ರೀಕೃತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮುದಾಯದ ಸಹಭಾಗಿತ್ವಕ್ಕೆ ವಿಶೇಷ ಆದ್ಯತೆ ನೀಡಲಾಗುವುದು. ಮಾತೃ ಆರೋಗ್ಯದ ಉತ್ತೇಜನ ಹಾಗೂ ತಡೆಯಬಹುದಾದ ತಾಯಿ ಮರಣಗಳ ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಲಾಗುವುದು. “ಶೂನ್ಯ ತಾಯಿ ಮರಣ” ಸಾಧಿಸುವ ಗ್ರಾಮ ಪಂಚಾಯಿತಿಗಳನ್ನು ರಾಜ್ಯ ಮಟ್ಟದಲ್ಲಿ ಪುರಸ್ಕರಿಸಲಾಗುವುದು. ತಮ್ಮ ಕ್ಷೇತ್ರಗಳಲ್ಲಿ ಇಂತಹ ಪಂಚಾಯಿತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಸ್ಥಳೀಯ ಶಾಸಕರನ್ನೂ ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು
ತಾಯಿ ಮರಣ ತಡೆಗಟ್ಟುವಿಕೆಗಾಗಿ ರಾಜ್ಯ ಮಟ್ಟದಲ್ಲಿ ವಿಶೇಷ ಘಟಕ ಸ್ಥಾಪಿಸಿ, ನಿರ್ದಿಷ್ಟ ಕಾರ್ಯಾಚರಣೆಗಳ ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು ಎಂದು ಸಚಿವರು ತಿಳಿಸಿದರು
ಈ ಸಂದರ್ಭದಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಸುರಕ್ಷತೆಗಾಗಿ ಸಿದ್ಧಪಡಿಸಲಾದ ‘Pre-Pregnancy Care’ ಹಾಗೂ ‘Quality Antenatal Care Programme’ ಸೇರಿದಂತೆ ಪ್ರಮುಖ ಮಾರ್ಗದರ್ಶಿ ಕಿರುಪುಸ್ತಕಗಳು ಮತ್ತು ಜಾಗೃತಿ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು.

