ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರ ಹರಿವು

ಮೈಸೂರು : ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಈ ಹಿನ್ನೆಲೆ ಜಲಾಶಯದಿಂದ ನೀರು ಹರಿದು ಬಿಡಲಾಗುತ್ತಿದೆ.

ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ, ಇದರಿಂದ ಸಂಪೂರ್ಣ ಭರ್ತಿಯಾಗುವ ಹಂತ ತಲುಪಿದೆ.
ಪ್ರಸ್ತುತ ಅಣೆಕಟ್ಟೆಗೆ 15,500 ಕ್ಯೂಸೆಕ್‌ ನೀರಿನ ಒಳಹರಿವು ಹೆಚ್ಚಾಗಿದೆ. 2,284 ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಈಗ 2,280 ಅಡಿಯಷ್ಟು ನೀರು ಭರ್ತಿಯಾಗಿದೆ. ಇಂದೇ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅಣೆಕಟ್ಟೆಯಿಂದ 10 ಸಾವಿರ ಕ್ಯೂಸೆಕ್‌ನಷ್ಟು ನೀರು ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ರೈತರಿಗೂ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚಿಸಿದೆ.

More articles

Latest article

Most read