Sunday, July 14, 2024

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ

Most read

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ. ಪಾಕಿಸ್ತಾನ್ (Pakistan) ಜಿಂದಾಬಾದ್‌ ಎಂದು ವಿಧಾನಸೌಧದಲ್ಲಿ‌ (Vidhanasoudha) ಕೂಗಿರುವ ವಿಚಾರ ಸಂಬಂಧ FSL ವರದಿಯಲ್ಲಿ ದೃಢಪಟ್ಟ ನಂತರ ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.

2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪಿನಿಂದ ʼಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆ ಕೇಳಿಬಂದಿದೆ. ಪೊಲೀಸರು ಆ ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದರು.

ಸರ್ಕಾರ ಕೂಡ ಕಟ್ಟುನಿಟ್ಟಿನ ತನಿಖೆಗೆ ಮುಂದಾಗಿದ್ದು, ಎಫ್ಎಸ್​ಎಲ್​ ಮೇಲೆ ಇಡೀ ಪ್ರಕರಣವೇ ನಿಂತಿದೆ.

More articles

Latest article