ಪಾಕ್‌ ಶೆಲ್‌ ದಾಳಿ: ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಇಬ್ಬರಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಇಂದು ನಡೆಸಿದ ಗುಂಡಿನ ದಾಳಿಗೆ ಘಟನೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮೃತಪಟ್ಟಿದ್ದಾರೆ. ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಲ್ಲಿ ಪಾಕಿಸ್ತಾನ ಗುಂಡಿನ ದಾಳಿಯ್ನು ತೀವ್ರಗೊಳಿಸಿದೆ.

ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಾಜ್ ಕುಮಾರ್ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಒಮರ್‌ ಅಬ್ದುಲ್ಲಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾವು ಸರ್ಕಾರದ ನಿಷ್ಠಾವಂತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಶುಕ್ರವಾರ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಜತೆಗೆ ಅವರು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ ಲೈನ್ ಸಭೆಯಲ್ಲೂ ಭಾಗವಹಿಸಿದ್ದರು ಎಂದು ಒಮರ್‌ ನೆನಪಿಸಿಕೊಂಡಿದ್ದಾರೆ.

More articles

Latest article

Most read