ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಕ್ರಮಕ್ಕೆ ಮುಂದಾಗುತ್ತಾ ಸರ್ಕಾರ?

Most read

ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದ ಬೆನ್ನಲ್ಲೇ ಪಾನಿಪುರಿಗೆ ಬಳಸುವ ಸಾಸ್, ಮೀಟಾ ಖಾರದ ಪುಡಿ ಸೇರಿದಂತೆ 5 ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಾನಿಪುರಿ ಮಾದರಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಈ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಪಾದಾರ್ಥಗಳನ್ನು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ನಂತ ಕ್ಯಾನ್ಸರ್ ಬರುತ್ತದೆ ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿಯನ್ನು ಬ್ಯಾನ್ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆದಿದೆ ಎನ್ನಲಾಗಿದೆ.

More articles

Latest article