ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಗುರುವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವಶೇಷಗಳಡಿಯಲ್ಲಿ ಒರ್ವ ವ್ಯಕ್ತಿ ಸಿಲುಕಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮೆಟ್ರೋ ನಿಲ್ದಾಣದ ಬಳಿ ಒಬ್ಬ ವ್ಯಕ್ತಿ ತನ್ನ ಸ್ಕೂಟಿಯಲ್ಲಿದ್ದಾಗ, ಮೇಲಾವರಣದ ಒಂದು ಭಾಗವು ಅವನ ಮೇಲೆ ಬಿದ್ದಿದೆ. ಕೆಲವು ಸ್ಥಳೀಯರೊಂದಿಗೆ ಪೊಲೀಸ್ ಸಿಬ್ಬಂದಿಗಳು ಆತನನ್ನು ಯಶಸ್ವಿಯಾಗಿ ರಕ್ಷಿಸಿ ಜಿಟಿಬಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಕಾನೂನು ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಗಾಯಾಳುಗಳನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ.
ಸದ್ಯ ಸ್ಥಳೀಯ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳದಲ್ಲಿದ್ದು, ಕ್ರಾನ್ಸ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗುತ್ತಿದೆ.