Thursday, December 12, 2024

ರೇಣುಕಾಸ್ವಾಮಿ ಕೊಲೆ : ನವೆಂಬರ್‌ 21ಕ್ಕೆ ದರ್ಶನ್‌ ಮತ್ತು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ

Most read

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಾದ A1 ನಟಿ ಪವಿತ್ರಾಗೌಡ, 11ನೇ ಆರೋಪಿಯಾದ ನಾಗರಾಜು, 12ನೇ ಆರೋಪಿ ಲಕ್ಷ್ಮಣ್‌ ಮತ್ತು 7ನೇ ಆರೋಪಿ ಅನುಕುಮಾರ್‌ ಅಲಿಯಾಸ್‌ ಅನು ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ಇದೇ ತಿಂಗಳ(ನವೆಂಬರ್) 21ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.

ಇದೇ ಪ್ರಕರಣದಲ್ಲಿ A2  ಆರೋಪಿಯಾಗಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ನ.21ಕ್ಕೆ ನಿಗದಿಯಾಗಿದೆ. ಪವಿತ್ರಾಗೌಡ ಹಾಗೂ ಇತರೆ ಮೂವರು ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸಹ ನ.21ಕ್ಕೆ ನ್ಯಾಯಪೀಠ ಮುಂದೂಡಿದೆ. ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ನಾಲ್ವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಕ್ರಮವಾಗಿ ಅ.14 ಮತ್ತು 16ರಂದು ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಇದೇ ಪ್ರಕರಣದಲ್ಲಿ A2 ಆರೋಪಿಯಾಗಿದ್ದ ನಟ ದರ್ಶನ್‌ಗೆ ಅನಾರೋಗ್ಯದ ಕಾರಣದಿಂದ 6 ವಾರಗಳ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಕಳೆದ ವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

More articles

Latest article