ಪವಿತ್ರಾಗೌಡ ಸೇರಿ 9 ಆರೋಪಿಗಳ DNA ಪರೀಕ್ಷೆ: ಸಿಕ್ಕ ಸಾಕ್ಷಿಗಳ ಜೊತೆ ಮ್ಯಾಚ್ ಮಾಡುವ ಪ್ರಕ್ರಿಯೆ!

Most read

ದರ್ಶನ್ ಮತ್ತಾತನ ಗ್ಯಾಂಗ್ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗುವ ಹಿನ್ನೆಲೆಯಲ್ಲಿ ಪೊಲೀಸರು ಇಂದೇ ಕೊಲೆ ಪ್ರಕರಣದ 17 ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ನಾಳೆ ಕೊಲೆ ಕೇಸ್‌ನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಕೊಲೆ ಪ್ರಕರಣದಲ್ಲಿ ಭಾಗಿಯಾದ ದರ್ಶನ್ ಸೇರಿ 17‌ ಆರೋಪಿಗಳ ಮೆಡಿಕಲ್ ಟೆಸ್ಟ್ ನಡೆಸಿದ್ದಾರೆ. ಪವಿತ್ರಾ ಗೌಡ ಸೇರಿ 9 ಆರೋಪಿಗಳಿಗೆ ಡಿಎನ್ಎ ಪರೀಕ್ಷೆ ಕೂಡ ಮಾಡಲಾಗಿದೆ. ಆರೋಪಿಗಳ ರಕ್ತ, ಕೂದಲಿನ ಮಾದರಿಯನ್ನು ಡಿಎನ್‌ಎ ಪರೀಕ್ಷೆಗಾಗಿ ಸಂಗ್ರಹ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ನಡೆದ ಪಟ್ಟಣಗೆರೆ ಶೆಡ್‌ನಲ್ಲಿ ಪೊಲೀಸರಿಗೆ ಕೂದಲು, ರಕ್ತದ ಮಾದರಿ ಸಿಕ್ಕಿದೆ. ಆರೋಪಿಗಳ ಡಿಎನ್‌ಎ ಪರೀಕ್ಷೆಯಲ್ಲಿ ಈ ಮಾದರಿಯನ್ನು ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತದೆ. ಆರೋಪಿಗಳ ರಕ್ತ, ಕೂದಲನ್ನು ಎಫ್ಎಸ್ಎಲ್‌ಗೆ ಕಳುಹಿಸಿ ತಾಳೆ ಮಾಡಲಾಗುತ್ತಿದೆ.

ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿರುವ ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ನಾಳೆ ನಟ ದರ್ಶನ್ ಅಂಡ್ ಗ್ಯಾಂಗ್‌ ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ.

More articles

Latest article