ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಚಿವ ಜಮೀರ್ ಅಹಮದ್ ಖಾನ್, ಶಾಸಕ ಎಸಿ ಶ್ರೀನಿವಾಸ್, ಎನ್ ಎ ಹ್ಯಾರೀಸ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸೌಮ್ಯ ರೆಡ್ಡಿ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು.
ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಇಂದು ಸಂಜೆ ಮೈಸೂರಿನಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.