ರಾಜಗಢ:ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಪಟೇಲ್ ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.
ರಾಜಗಢ ಜಿಲ್ಲೆಯ ಸುಥಾಲಿಯಾ ಪಟ್ಟಣದಲ್ಲಿ ರಾಣಿ ಅವಂತಿ ಬಾಯಿ ಲೋಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.
“ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಮಧ್ಯಪ್ರದೇಶದ ಜನರೇ ಸಚಿವರ ಈ ಹೇಳಿಕೆಯನ್ನು ಟೀಕಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಘಟಕ ಸಚಿವ ಪ್ರಹ್ಲಾದ್ ಪಟೇಲ್ ಅವರ ಭಾಷಣದ ವೀಡಿಯೊವನ್ನು ಹಂಚಿಕೊಂಡಿದ್ದು, ರಾಜ್ಯದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕಾಪ್ರಹಾರ ನಡೆಸಿದೆ.