ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.