ಹಿಂದಿ ಪರವಾಗಿ ಸಲ್ಲಿಸಿದ ಅರ್ಜಿ ವಜಾ, ಅರ್ಜಿದಾರರಿಗೆ 1 ಲಕ್ಷ ರೂ. ದಂಡ

ಬೆಂಗಳೂರು : ಎಸ್ಸೆಸ್ಸೆಲ್ಸಿ ತೃತೀಯ ಭಾಷಾ ಪರೀಕ್ಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿದಾರರು ಅಧಿಕೃತ ದಾಖಲೆಗಳನ್ನು ಒದಗಿಸದ ಹಿನ್ನೆಲೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. 

ಎಸ್ಸೆಸ್ಸೆಲ್ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್‌ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಕೊನೆ ಕ್ಷಣದ ಈ ನಿರ್ಧಾರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಈ ಅರ್ಜಿಯನ್ನು ದಂಡ ವಿಧಿಸಿ ವಜಾ ಮಾಡಲಾಗುವುದು. ಪತ್ರಿಕಾ ಹೇಳಿಕೆಗಳನ್ನು ಓದಿ ಪಿಐಎಲ್‌ ಸಲ್ಲಿಸಬಹುದೇ ಎಂದು ಪ್ರಶ್ನಿಸಿದೆ. ಬಳಿಕ 50 ಸಾವಿರ ರೂಪಾಯಿ ದಂಡ ವಿಧಿಸಿ ಪಿಐಎಲ್‌ ವಜಾಗೊಳಿಸಲಾಯಿತು.

ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ ಎಂಬ ಅರ್ಥದಲ್ಲಿ ಎಲ್ಲೂ ಮಾಧ್ಯಮಗಳಲ್ಲಿ ಪ್ರಕಟವಾಗಿಲ್ಲ. ಪೂರ್ವಾಗ್ರಹ ಪೀಡಿತ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳು ಕಿಡಿ ಕಾರಿದರು.
ಅರ್ಜಿದಾರರಿಗೆ ವಿಧಿಸಿದ್ದ 50 ಸಾವಿರ ರೂಪಾಯಿ ದಂಡದ ಮೊತ್ತವನ್ನು 1 ಲಕ್ಷ ರೂ.ಗೆ ಏರಿಸಿ ಹೈಕೋರ್ಟ್‌ ಆದೇಶ ಹೊರಡಿಸಿತು.

More articles

Latest article

Most read