Friday, December 6, 2024

EWS ಕೋಟಾ ಜಾರಿಗೆ ತರಲು ಪಿಐಎಲ್ ಅರ್ಜಿ : ಕೇಂದ್ರ-ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದ ಹೈಕೋರ್ಟ್

Most read

ಬೆಂಗಳೂರು : ಆರ್ಥಿಕವಾಗಿ ದುರ್ಬಲ ವರ್ಗದ (EWS) ವರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡವ ಕುರಿತಂತೆ ಸಂವಿಧಾನಕ್ಕೆ ತಂದಿರುವ 103 ನೇ ತಿದ್ದುಪಡಿಯನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ (ಪಿಐಎಲ್) ಕರ್ನಾಟಕ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೆ ಆಕ್ಷೇಪಣೆಗಳನ್ನ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ. ಜೆ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ಅದೇಶ ಮಾಡಿದೆ. ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ನೀಡಿದೆ. ಆದರೆ ಇದು ಇನ್ನೂ ಅನುಷ್ಟಾನಕ್ಕೆ ಬಂದಿಲ್ಲ. ಈ ಸಂಬಂಧ 2024ರ ಜನವರಿ 14ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಗೆ ಮನವಿ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

EWS ವಿಚಾರಕ್ಕೂ ಅರ್ಜಿದಾರರಿಗೂ ಏನು ಸಂಬಂಧ ಎಂದು ಹೈಕೋರ್ಟ್‌ ಪ್ರ‍ಶ್ನಿಸಿದೆ. ಸರ್ಕಾರದ ಈ ಕ್ರಮದಿಂದ ತೊಂದರೆ ಆದವರು ಮನವಿ ಸಲ್ಲಿಸಿ ಪರಿಹಾರ ಪಡೆಯುತ್ತಾರೆ. ಹೀಗಾಗಿ ಅರ್ಜಿ ವಿಚಾರಣೆಯನ್ನು ಪರಿಗಣಿಸಲಾಗದು ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಸಾಂವಿಧಾನಿಕವಾಗಿ ಬರುವ ಮೀಸಲಾತಿಯನ್ನು ಪಡೆಯಲು ಅರ್ಹರಿರುವವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದು ತಿಳಿಸಿದರು.

ಇದನ್ನು ಸಂವಿಧಾನ ಬದ್ಧವಾಗಿ ಈ ಮೀಸಲಾತಿ ಜಾರಿ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ರಾಜ್ಯದಲ್ಲಿ ಈ ರೀತಿಯ ವಿಳಂಬದಿಂದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸರ್ಕಾರದ ಸೇವೆಗೆ ಸೇರ್ಪಡೆಯಾಗಬಯಸುವವರ ಮೇಲೆ ಪರಿಣಾಮ ಭೀರಲಿದೆ ಎಂದು ದೂರಲಾಗಿದೆ. ತಕ್ಷಣವೇ ಶೇ 10 ರಷ್ಟು ಮೀಸಲಾತಿಯನ್ನು ಜಾರಿ ಮಾಡಬೇಕು. ಕೇಂದ್ರ ಸರ್ಕಾರದ ಈ ನಿರ್ಧಾರ ಆರ್ಥಿಕವಾಗಿವಾಗಿ ಹಿಂದುಳಿದ ಪ್ರತಿಭಾವಂತರಾಗಿದ್ದು ಅರ್ಹರಿರುವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ನೀಡಬೇಕಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದು, ನ್ಯಾಯಪೀಠ ಮಧ್ಯಪ್ರವೇಶ ಮಾಡಬೇಕು.

EWS ಹಿನ್ನೆಲೆ :

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 2019 ರಲ್ಲಿ ಕೇಂದ್ರ ಸರ್ಕಾರ 2019ರ ಜನವರಿ 12ರಂದು ಸಂವಿಧಾನಕ್ಕೆ 103 ನೇ ತಿದ್ದುಪಡಿ ತಂದು ಪರಿಚ್ಛೇದ 14 ಮತ್ತು 16(6)ನೇ ವಿಧಿಗೆ ಸೇರ್ಪಡಿಸಿದೆ.

More articles

Latest article