Wednesday, May 22, 2024

ರಾಮಮಂದಿರ ಉದ್ಘಾಟನೆ: ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ರದ್ದು ಪಡಿಸುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ!

Most read

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾ ಮಹೋತ್ಸವ (consecration ceremony)ವನ್ನು ರದ್ದು ಪಡಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ಗೆ (Allahabad High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಎಎನ್‌ಐ ಪ್ರಕಾರ , ಉತ್ತರ ಪ್ರದೇಶದ ಗಾಜಿಯಾಬಾದ್‌ನ ನಿವಾಸಿ ಭೋಲಾ ದಾಸ್ ಎಂಬುವವರು ಈ ಅರ್ಜಿಯನ್ನು ಸಲ್ಲಿಸಿದ್ದು, ಹಿಂದೂ ಪಂಚಾಂಗದ ಪ್ರಕಾರ ಪೌಷ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ದೇವಾಲಯವು ಇನ್ನೂ ನಿರ್ಮಾಣ ಹಂತದಲ್ಲಿದೆ ಮತ್ತು ಸನಾತನ ಸಂಪ್ರದಾಯಕ್ಕೆ  ವಿರುದ್ಧವಾಗಿ ದೇವರ ಪ್ರತಿಷ್ಠಾಪನೆ ನಡೆಯಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಸಲ್ಲಿಸಿದರು.

ಜನವರಿ 22, 2024 ರಂದು ನಿರ್ಮಾಣ ಹಂತದಲ್ಲಿರುವ ಅಯೋಧ್ಯೆಯ ದೇವಾಲಯದಲ್ಲಿ ರಾಮ್ ಲಲ್ಲಾನ ವಿಗ್ರಹವನ್ನು ಸ್ಥಾಪಿಸಲು ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವೇರಿಸಲಿದ್ದಾರೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ… ದೇವಾಲಯ ಇನ್ನೂ ಅಪೂರ್ಣವಾಗಿರುವುದರಿಂದ ಯಾವುದೇ ದೇವರನ್ನು ಪ್ರತಿಷ್ಠಾಪಿಸಲು ಸಾಧ್ಯವಿಲ್ಲ,’’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ಮುಂಬರುವ ಲೋಕಸಭೆ ಚುನಾವಣೆಯ ಹಿತದೃಷ್ಠಿಯಿಂದ ರಾಜಕೀಯ ಲಾಭ ಪಡೆಯಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಆರೋಪಿಸಿದೆ.

More articles

Latest article