ಪ್ರಧಾನಿ ಮೋದಿಯಿಂದ ರೈತರಿಗೆ ನಿರಂತರ ಅನ್ಯಾಯ

Most read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರಿಗೆ ಪದೇ ಪದೇ  ದ್ರೋಹ ಬಗೆದಿದ್ದರಿಂದಲೇ, ರೈತರು ನ್ಯಾಯ ಕೇಳಲು ದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರು ನ್ಯಾಯಕ್ಕಾಗಿ ಪದೇ ಪದೇ ದೆಹಲಿಯ ಬಾಗಿಲಿಗೆ ಏಕೆ ಬರಬೇಕು ಎಂದು ಪ್ರಧಾನಿ ಮೋದಿ ಅವರನ್ನು ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ಹರಿಯಾಣ ಮತ್ತು ರಾಜಸ್ಥಾನ ಪ್ರವಾಸದಲ್ಲಿರುವ ನೀವು, ದೇಶಕ್ಕೆ ಅನ್ನ ನೀಡುವ ರೈತರ ಹೋರಾಟವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಸರ್ಕಾರ ಪದೇ ಪದೇ ದ್ರೋಹ ಮಾಡಿರುವುದರಿಂದ ರೈತರು ನ್ಯಾಯ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. 2022ರ ವೇಳೆಗೆ ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ದುಪ್ಪಟ್ಟು ಮಾಡುವ ಭರವಸೆಯನ್ನು ಈಡೇರಿಸದಿರುವುದು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡಲು ಸಮಿತಿ ರಚಿಸಿದರೂ ಕಾರ್ಯ ನಿರ್ವಹಿಸದೆ ಇರುವುದು, ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದಿರುವುದು ನಿಮ್ಮ ಸರ್ಕಾರ ರೈತರಿಗೆ ಮಾಡಿದ ದ್ರೋಹ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

More articles

Latest article