Saturday, July 27, 2024

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ : ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Most read

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಅಂಚೆಚೀಟಿಗಳನ್ನು ಹೊಂದಿರುವ ಪುಸ್ತಕವನ್ನು ತೆರೆಯುವ ಮೂಲಕ ಬಿಡುಗಡೆ ಮಾಡಲಾಗಿದೆ.

ಅಂಚೆಚೀಟಿಗಳ ಬಿಡುಗಡೆ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಇಂದು, ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾ ಅಭಿಯಾನದಿಂದ ಆಯೋಜಿಸಲಾದ ಮತ್ತೊಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ನನಗೆ ಸಿಕ್ಕಿದೆ. ಇಂದು, ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ 6 ಸ್ಮರಣಾರ್ಥ ಅಂಚೆ ಚೀಟಿಗಳ ಆಲ್ಬಂ ಬಿಡುಗಡೆ ಮಾಡಲಾಗಿದೆ. ದೇಶದ ಜನರಿಗೆ ಮತ್ತು ಪ್ರಪಂಚದಾದ್ಯಂತದ ಎಲ್ಲಾ ರಾಮಭಕ್ತರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಅಂಚೆಚೀಟಿಗಳ ವಿನ್ಯಾಸವು ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಸಂಬಂಧಿಸಿದ ಅಂಶಗಳನ್ನು ಒಳಗೊಂಡಿದ್ದು, ಇದರಲ್ಲಿ ದೇವಾಲಯ, ‘ಮಂಗಲ್ ಭವನ ಅಮಂಗಲ್ ಹರಿ,’ ಸೂರ್ಯ, ಸರಯು ನದಿ ಮತ್ತು ದೇವಾಲಯದ ಸುತ್ತಮುತ್ತಲಿನ ಶಿಲ್ಪಗಳು ಕಾಣಸಿಗುತ್ತದೆ.

ಅಯೋಧ್ಯೆಯ ರಾಮಮಂದಿರ ಸ್ಮರಣಾರ್ಥ ಅಂಚೆಚೀಟಿ ಸಂಗ್ರಹವು ಆರು ರೀತಿಯಲ್ಲಿದೆ. ರಾಮ ಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಮಾ ಶಬರಿಯ ಚಿತ್ರಣಗಳನ್ನು ಒಳಗೊಂಡಿವೆ.

More articles

Latest article