ಅಯೋಧ್ಯೆಯಲ್ಲಿ ತಲೆಎತ್ತಿ ನಿಲ್ಲಲಿರುವ ರಾಮ ಮಂದಿರದ (Ayodhya Ram Mandir) ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಯಶಸ್ವಿಯಾಗಿ ನೆರವೇರಿದೆ. ಶ್ರೀರಾಮನು ಅಯೋಧ್ಯೆಯ ರಾಮ ಮಂದಿರದಲ್ಲಿ ನೆಲೆಸಿದ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದೆ.
ಮಧ್ಯಾಹ್ನ 12.20ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು 12:45ರವರೆಗೆ ನಡೆದಿದೆ. ದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ.
ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕರ್ಮದಲ್ಲಿ ಪಾಲ್ಗೊಂಡಿದ್ದರು.
ದೇವಸ್ಥಾನವನ್ನು ಅತ್ಯಾಕರ್ಷಕವಾಗಿ ಅಲಂಕರಿಸಲಾಗಿದೆ. ಅಯೋಧ್ಯೆ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.