ಬಿಜೆಪಿ ನೇತೃತ್ವದ ಕೇಂದ್ರದ ‘ಶ್ವೇತ ಪತ್ರ’ಕ್ಕೆ ವಿರುದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ ‘ಕರಾಳ ಪತ್ರ’ ಹೊರಡಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆರ್ಥಿಕತೆ, ನಿರುದ್ಯೋಗ ಮತ್ತು ಆಂತರಿಕ ಭದ್ರತೆಯನ್ನು ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎನ್ಡಿಎ ಸರ್ಕಾರ ವಿರುದ್ಧದ ‘ಕರಾಳ ಪತ್ರ’ವನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಆರ್ಥಿಕತೆ, ನಿರುದ್ಯೋಗ, , ಬೆಲೆ ಏರಿಕೆ ಮತ್ತು ರೈತರ ಸಂಕಷ್ಟದ ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಧಿಯ 10 ವರ್ಷ ಅನ್ಯಾಯ ಕಾಲ ಎಂದು ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್, ಉದ್ಯೋಗ ಸೃಷ್ಟಿಸುವಲ್ಲಿ, ದೇಶದ ಆರ್ಥಿಕಲತೆ ನಿವರ್ಹಿಸುವಲ್ಲಿ, ರೈತರ ಸಮಸ್ಯೆ ಆಲಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಇದಲ್ಲದೇ ಬಿಜೆಪಿಯೇತರ ರಾಜ್ಯಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದ್ದು, ಬಿಜೆಪಿ ಸರ್ಕಾರದ ರಾಜ್ಯಗಳಿಗೆ ಮಾತ್ರ ಸಹಕಾರ ನೀಡುತ್ತಿದೆ. ಬಿಜೆಪಿಯೇತರ ರಾಜ್ಯಗಳ ಎಲ್ಲಾ ಫೈಲ್ ಗಳನ್ನು ಪೆಂಡಿಂಗ್ ಇಡಲಾಗಿದೆ. ಮನ್ರೇಗಾ ಯೋಜನೆಯ ಅನುದಾನ ಕೂಡ ನೀಡುತ್ತಿಲ್ಲ. ಎಲ್ಲಾ ರಾಜ್ಯಗಳಿಗೂ ಸಮವಾಗಿ ಹಣ ಹಂಚಿಕೆ ಮಾಡಿದ್ದೇವೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ. ಉದ್ದೇಶಪೂರ್ವಕವಾಗಿಯೇ ಇದೆಲ್ಲಾ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರೈತರ ಆದಾಯ ದುಪ್ಪಟ್ಟು, ಉದ್ಯೋಗ ಸೃಷ್ಠಿ, ಬೆಲೆ ಏರಿಕೆ ಬಗ್ಗೆ ಬಿಜೆಪಿ ನೀಡಿದ್ದ ಎಲ್ಲಾ ಭರವಸೆಗಳು ಸುಳ್ಳಾಗಿವೆ. ಕೇಂದ್ರ ಸರ್ಕಾರ ಕೆಲವು ಉದ್ಯಮಿಗಳ ಪರವಾಗಿದೆ. ದೊಡ್ಡ ಕಂಪನಿಗಳ ಸಾಲವನ್ನು ಮನ್ನಾ ಮಾಡ್ತಾರೆ. ಹಣದುಬ್ಬರ ತಡೆಯುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2014ರಲ್ಲಿ ಪ್ರಧಾನಿ ಮೋದಿ ಅವರು ಮೊದಲು ಅಧಿಕಾರಕ್ಕೆ ಬಂದ ನಂತರ ಹಾಗೂ ಅದಕ್ಕೂ ಮುಂಚೆ ಇದ್ದ ಭಾರತದ ಆರ್ಥಿಕ ಸ್ಥಿತಿ ನಡುವಿನ ವ್ಯತ್ಯಾಸಗಳನ್ನು ತೋರಿಸುವ ಶ್ವೇತ ಪತ್ರವನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ ಎಂದು ಬಿಜೆಪಿ ನಾಯಕ ಹಾಗೂ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಜಯಂತ್ ಸಿನ್ಹಾ ಅವರು ತಿಳಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ ‘ಕರಾಳ ಪತ್ರ’ ಹೊರಡಿಸಿದ್ದಾರೆ.