ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಶಿಸ್ತಿನ ವರ್ತನೆಗಾಗಿ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷಗಳ ಸಂಸದರನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ ಬುಧವಾರ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಲಾಪಕ್ಕೆ ಅಡ್ಡಿಪಡಿಸದಂತೆ ಪ್ರತಿಪಕ್ಷಗಳಿಗೆ ಒತ್ತಾಯಿಸಿದ್ದಾರೆ.
ಇಂದಿನಿಂದ ಶುರುವಾಗು ಅಧಿವೇಶನ ಫೆಬ್ರವರಿ 9 ರಂದು ಮುಕ್ತಾಯಗೊಳ್ಳಲಿದೆ. ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ ಎಂದು ಹೇಳಿದ್ದಾರೆ.
ಹೊಸ ಸರ್ಕಾರ ರಚನೆಯಾದ ನಂತರ ಬಿಜೆಪಿ ಸಂಪೂರ್ಣ ಬಜೆಟ್ ಮಂಡಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಸಂಪ್ರದಾಯವನ್ನು ನಾವು ಅನುಸರಿಸಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.