ಪೋಕ್ಸೋ ಪ್ರಕರಣ: ಖುದ್ದು ಹಾಜರಾಗಿ ಹೇಳಿಕೆ ನೀಡಲು ಶಿವಮೂರ್ತಿ ಮುರುಘಾ ಶರಣರಿಗೆ ಕೋರ್ಟ್‌ ಆದೇಶ

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಈ ಪ್ರಕರಣ ಸಂಬಂಧ ಇಂದು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿದೆ. ಶಿವಮೂರ್ತಿ ಮುರುಘಾ ಶರಣರ ಹೇಳಿಕೆಗೆ ಜುಲೈ 3ರಂದು ದಿನಾಂಕ ನಿಗದಿ ಮಾಡಿದ್ದು, ಅಂದು ಮುರುಘಾ ಶ್ರೀಗಳು ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಮುರುಘಾಶ್ರೀಗಳಿಗೆ ಶ್ರವಣದೋಷವಿರುವ ಹಿನ್ನೆಲೆಯಲ್ಲಿ ವಿಡಿಯೋ ಕಾನಫರೆನ್ಸ್‌ ಬದಲು ಖುದ್ದು ಹಾಜರಾಗಲು ನ್ಯಾಯಾಲಯ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುರುಘಾಶ್ರೀಗಳಿಗೆ ಹೈಕೋರ್ಟ್, ಈಗಾಗಲೇ ಷರತ್ತುಬದ್ಧ ಜಾಮೀನು ನೀಡಿದೆ. ಷರತ್ತಿನ ಪ್ರಕಾರ ಅವರು ಚಿತ್ರದುರ್ಗ ಜಿಲ್ಲೆ ಪ್ರವೇಶಿಸಿಸುವಂತಿಲ್ಲ. ಇದೀಗ ವಿಡಿಯೋ ಕಾನ್ಫರೆನ್ಸ್ ಬದಲು ಬದಲು ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲಿಸಲು ಕೋರ್ಟ್ ಜುಲೈ 3 ದಿನಾಂಕ ನಿಗದಿಪಡಿಸಿದೆ. ಇದೀಗ, ಇಬ್ಬರು ಸಂತ್ರಸ್ತ ಬಾಲಕಿಯರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ.

More articles

Latest article

Most read