ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Most read

ಬೆಂಗಳೂರು : ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ವರದಿಯಾಗಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ಟೋಲ್ ಬಳಿ ಈ ಘಟನೆ ನಡೆದಿದೆ.

ಸರ್ಕಲ್ ಇನ್ಸ್ ಪೆಕ್ಟರ್ ಅಶೋಕ್ ಆರೋಪಿಗಳನ್ನು ಗಾಂಜಾ ಕೇಸ್ ನಲ್ಲಿ ಬಂಧಿಸಲು ಹೋದಾಗ ಫೈರಿಂಗ್ ನಡೆದಿದೆ. ಈ ಸಂದರ್ಭದಲ್ಲಿ ಆರೋಪಿ ಪೊಲೀಸರ ಮೇಲೆ ಲಾಂಗ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

More articles

Latest article