ಎಲ್ಲಾ ಪೋಲೀಸ್ ಅಧಿಕಾರಿ, ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

Most read

ರಾಜ್ಯದ ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹಲ್ಮಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ ಎಂದಿದ್ದಾರೆ.

ಆದ್ದರಿಂದ, ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು, ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸಿ, ಸದರಿ ಹಲ್ಮಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳುವುದು (to strap the helmet) ಎಂದು ತಿಳಿಸಿದ್ದಾರೆ.

ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್ ನ ನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದು, ಆ ಪುಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸುವಂತೆ ನಿರ್ದೇಶನಗಳನ್ನು ನೀಡಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

More articles

Latest article