ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್

ಮಂಗಳೂರು ಸೆ. 26: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

2025ರ ಮೇ 27ರಂದು ಬಂಟ್ವಾಳ ತಾಲೂಕಿನ ಕುರಿಯಾಲ ಗ್ರಾಮದ ಇರಾಕೋಡಿ ಬಳಿ ಅಬ್ದುಲ್ ರೆಹಮಾನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿತ್ತು. ಪಿಕಪ್ ವಾಹನದಿಂದ ಮರಳು ಇಳಿಸುತ್ತಿದ್ದ ವೇಳೆ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್ ಮೃತಪಟ್ಟಿದ್ದರು. ಅವರೊಂದಿಗೆ ಇದ್ದ ಕಲಂದರ್ ಶಫಿ ಅವರ ಮೇಲೂ ದಾಳಿ ನಡೆದಿತ್ತು.

ಸುಹಾಸ್ ಶೆಟ್ಟಿ ಹತ್ಯೆಯ ಕೆಲವೇ ದಿನಗಳ ಬಳಿಕ ಈ ಘಟನೆ ನಡೆದಿದ್ದರಿಂದ, ಹಿಂದಿನ ಹತ್ಯೆಗೆ ಪ್ರತೀಕಾರವಾಗಿ ಅಬ್ದುಲ್ ರೆಹಮಾನ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ಆಗ ವ್ಯಕ್ತವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಹಲವು ಮಂದಿಯನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಹೇಳಿಕೆ ದಾಖಲಿಸಲು ನೋಟಿಸ್

ಪೊಲೀಸರ ಪ್ರಕಾರ, ಪ್ರಕರಣದ ತನಿಖೆಯಲ್ಲಿ ಕೆಲವು ಸತ್ಯಾಂಶಗಳು ಮತ್ತು ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆ ದಾಖಲಿಸುವ ಅಗತ್ಯವಿದೆ. ಹೀಗಾಗಿ ಅವರನ್ನು ಸಾಕ್ಷಿದಾರರಾಗಿ ವಿಚಾರಣೆ ನಡೆಸಲು ನೋಟಿಸ್ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಸೆಪ್ಟೆಂಬರ್ 26ರಂದು ಕಲ್ಲಡ್ಕದಲ್ಲಿರುವ ಅವರ ನಿವಾಸದಲ್ಲೇ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಅವರ ಹೇಳಿಕೆ ದಾಖಲಿಸಿದ ಬಳಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನೋಟಿಸ್‌ಗೆ ಹಿಂದೂ ಸಂಘಟನೆಗಳ ಆಕ್ಷೇಪ

ಪ್ರಭಾಕರ್ ಭಟ್ ಅವರಿಗೆ ನೋಟಿಸ್ ನೀಡಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಬ್ದುಲ್ ರೆಹಮಾನ್ ಹತ್ಯೆಗೂ ಪ್ರಭಾಕರ್ ಭಟ್‌ಗೂ ಸಂಬಂಧವೇನು ಎಂದು ಪ್ರಶ್ನಿಸಿರುವ ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಪೊಲೀಸ್ ಕ್ರಮದ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೀಡಿರುವ ನೋಟಿಸ್ ಇದೀಗ ದಕ್ಷಿಣ ಕನ್ನಡದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

More articles

Latest article

Most read