ಪೊಲೀಸ್‌ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾ.ಕೇಶವನಾರಾಯಣ ಆಯೋಗದ ವರದಿ ತಿರಸ್ಕರಿಸಿದ ಸರ್ಕಾರ

Most read

ಬೆಂಗಳೂರು: ಪೊಲೀಸ್‌ ಅಧಿಕಾರಿ ಎಂ.ಕೆ.ಗಣಪತಿಯವರ ಆತ್ಮಹತ್ಯೆಗೆ ಹಿಂದಿನ ಗೃಹಸಚಿವ ಕೆ.ಜೆ.ಜಾರ್ಜ್‌ ಹಾಗೂ ಐ.ಪಿ.ಎಸ್‌ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪ್ರಣವ ಮೊಹಾಂತಿ ಅವರು ಕಾರಣ ಅಲ್ಲ ಎಂದು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ. ಇವರ ವಿರುದ್ಧ ದಿ. ಗಣಪತಿ ಅವರು ಸಂದರ್ಶನವೊಂದರಲ್ಲಿ ಮಾಡಿದ್ದ ಆರೋಪಗಳನ್ನು ಆಯೋಗವು ತಳ್ಳಿಹಾಕಿದೆ.

ತನಿಖಾ ಪ್ರಕರಣದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿರುವುದರಿಂದ ಕೆಲವು ಅಧಿಕಾರಿ/ಸಿಬ್ಬಂದಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಡಿರುವ ಶಿಫಾರಸ್ಸನ್ನು ರಾಜ್ಯ ಸಚಿವ ಸಂಪುಟ ತಿರಸ್ಕರಿಸಿದೆ ಎಂದು  ಕಾನೂನು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ ಪಾಟೀಲ ತಿಳಿಸಿದ್ದಾರೆ.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಎಂ.ಕೆ ಶ್ರೀವಾಸ್ತವ್‌, ಐಪಿಎಸ್‌ ನಿವೃತ್ತ ಪೊಲೀಸ್‌ ಮಹಾನಿರ್ದೇಶಕರು ಇವರು ಸರ್ಕಾರಕ್ಕೆ ಸಲ್ಲಿಸಿರುವ ಅಧ್ಯಯನ ವರದಿಯಲ್ಲಿ ತನಿಖಾ ಕ್ರಮಗಳ ಬಗ್ಗೆ ವಿಚಾರಣಾ ಆಯೋಗವು ಮಾಡಿರುವ ಆಕ್ಷೇಪಣೆಗಳನ್ನು ಸಿ.ಬಿ.ಐ ಸಲ್ಲಿಸಿರುವ ವರದಿಯನ್ನು ಮಾನ್ಯ ಕರ್ನಾಟಕ ಹೈಕೋರ್ಟ್ ಮಾನ್ಯ ಮಾಡಿರುವುದರಿಂದ ಮತ್ತು ಸುಪ್ರೀಂಕೋರ್ಟ್‌  ಎಸ್‌.ಎಲ್‌.ಪಿ ಯಲ್ಲಿ ಸಿ.ಬಿ.ಐ ಪ್ರಕರಣವನ್ನು ಮುಕ್ತಾಯ ಮಾಡಿರುವುದನ್ನು ಎತ್ತಿ ಹಿಡಿದಿರುವುದರಿಂದ, ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯ ಶಿಫಾರಸ್ಸನ್ನು ಒಪ್ಪುವ ಅಗತ್ಯವಿಲ್ಲವೆಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎನ್‌. ಕೇಶವನಾರಾಯಣ ಇವರ ವಿಚಾರಣಾ ವರದಿಯನ್ನು ಸಚಿವ ಸಂಪುಟವು ಭಾಗಶಃ ಒಪ್ಪಿದ್ದು, ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯ ಶಿಫಾರಸ್ಸನು ತಿರಸ್ಕರಿಸಿದೆ ಎಂದು ತಿಳಿಸಿದರು.

More articles

Latest article